ಮಂಗಳೂರು: ನಮ್ಮ ಮೇಲೆ ಬಂದ ಅಪವಾದಗಳು ಬೆಟ್ಟದ ಮೇಲಿಂದ್ದ ನೀರು ಹರಿದು ಬಂದ ಹಾಗೇ ಹೋಗಿದೆ, ಈ ಮೂಲಕ ನಾನು ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆಂದು ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹೇಳಿದರು.
ಧರ್ಮಸ್ಥಳದಲ್ಲಿ ನಡೆದ ಭಜನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ವಿರುದ್ಧ ಶತ್ರುತ್ವ ಯಾಕೆ ಬಂತು ಅಂತ ನಮಗೆ ಗೊತ್ತಿಲ್ಲ. ಇಷ್ಟು ಹಗೆತನ, ಅಪವಾದ ಯಾಕೆ ಬಂತು ಅಂತ ಗೊತ್ತಿಲ್ಲ. ನಾವು ಸೇವೆ ಮಾಡುತ್ತಲೇ ಬಂದಿದ್ದು, ಅದು ಪ್ರಚಾರಕ್ಕಾಗಿ ಅಲ್ಲ.
ಇನ್ನೂ ನಮ್ಮ ಆರೋಗ್ಯದ ಗುಟ್ಟೇ ನಮ್ಮ ನಿಸ್ವಾರ್ಥ ಸೇವೆ. ನಮ್ಮ ಎಲ್ಲ ಕಾರ್ಯಕ್ರಮಗಳನ್ನು ನೀವು ಎಲ್ಲರೂ ಗಮನಿಸಿದ್ದೀರಿ. ನಾವು ಇಲ್ಲಿ ನಿಮಿತ್ತ ಮಾತ್ರ, ಆದರೆ ಮುಂದುವರೆಸಿಕೊಂಡು ಹೋಗಿದ್ದು ಅದಕ್ಕೆ ಸಂಬಂಧಪಟ್ಟ ಇಲಾಖೆಯವರು. ಕೆಲವರು ಪ್ರೀತಿಯಲ್ಲಿ ಟೀಕೆ ಮಾಡಿದ್ರು, ಇವರು ಹಾಗೆ ಟೀಕೆ ಮಾಡಿಲ್ಲ. ನಿಮಗೆ ನಾನು ಎಷ್ಟು ಕೃತಜ್ಞತೆ ಸಲ್ಲಿಸಿದರೂ ಕಡಿಮೆಯೇ ಎಂದರು.
ಸರ್ಕಾರಕ್ಕೆ ನಾನು ಆಭಾರಿ, ಎಸ್‌ಐಟಿ ರಚಿಸಿದ ಕಾರಣ ಸತ್ಯ ಹೊರಬರುತ್ತಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ.
ಧರ್ಮಸ್ಥಳ ವೇರೆ, ಧರ್ಮಸ್ಥಳದ ಊರಿನವರು ಬೇರೆಯಲ್ಲ. ಎಷ್ಟು ನಿಷ್ಠುರವಾಗಿ ನಮ್ಮ ಮೇಲೆ ದಬ್ಬಾಳಿಕೆ ನಡೆದಿದೆ ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಇದೀಗ ನಮ್ಮ ಮೇಲೆ ಬಂದ ಆರೋಪ ಬೆಟ್ಟದ ಮೇಲಿಂದ್ದ ನೀರು ಹರಿದು ಹೋದ ಹಾಗೇ ಹೋಯಿತು. ಇದೀಗ ಮನಸ್ಸು ಹಗುರವಾಗಿದೆ.
ಇನ್ನೂ ನಮ್ಮ ಮೇಲೆ ದೃಢವಾದ ನಂಬಿಕೆಯಿಟ್ಟು, ಲಕ್ಷಾಂತರ ಮಂದಿ ಬಂದು ಹೋಗಿದ್ದಾರೆ. ನಿಮ್ಮ ಧರ್ಮ ಸೋತರೆ, ನಮ್ಮ ಧರ್ಮ ಸೋತ ಹಾಗೆ ಅಂತ ಹೇಳಿದ್ದಾರೆ. ಈ ಶತ್ರುತ್ವ ಯಾಕೆ ಅಂತ ಕೇಳ್ತಾರೆ, ನನಗೂ ಈ ದ್ವೇಷ ಯಾಕೆ ಅಂತ ಬೇಕು. ನಾವು ಯಾರನ್ನೂ ಹೀಯಾಳಿಸಿಲ್ಲ, ದ್ವೇಷ ಕೂಡ ಮಾಡಿಲ್ಲ. ನಾವು ತಪ್ಪು ಮಾಡದ ಕಾರಣ ನಮಗೆ ಆತ್ಮವಿಶ್ವಾಸ ಇದೆ ಎಂದು ಹೇಳಿದರು.