Select Your Language

Notifications

webdunia
webdunia
webdunia
webdunia

ಧರ್ಮಸ್ಥಳ ಪ್ರಕರಣ: ರಾಜ್ಯ ಸರ್ಕಾರದಿಂದ ಎಸ್‌ಐಟಿಗೆ 20 ಪೊಲೀಸ್ ಅಧಿಕಾರಿಗಳ ನಿಯೋಜನೆ

ಧರ್ಮಸ್ಥಳ ಅಪರಾಧ ಪ್ರಕರಣ

Sampriya

ಬೆಂಗಳೂರು , ಬುಧವಾರ, 23 ಜುಲೈ 2025 (18:31 IST)
ಬೆಂಗಳೂರು: ಧರ್ಮಸ್ಥಳದಲ್ಲಿ ತಲೆಬುರಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ದೊಡ್ಡ ತಿರುವು ಸಿಕ್ಕಿದ್ದು, ರಾಜ್ಯ ಸರ್ಕಾರ ಇದೀಗ ಪ್ರಕರಣವನ್ನು ಎಸ್‌ಐಟಿಗೆ ವಹಿಸಿದೆ. 

ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡಕ್ಕೆ (SIT) ಪೊಲೀಸ್ ವರಿಷ್ಠಾಧಿಕಾರಿಯಿಂದ ಹಿಡಿದು ಹೆಡ್ ಕಾನ್‌ಸ್ಟೆಬಲ್‌ಗಳವರೆಗೆ ವಿವಿಧ ಶ್ರೇಣಿಯ 20 ಪೊಲೀಸ್ ಅಧಿಕಾರಿಗಳನ್ನು ನಿಯೋಜನೆ ಮಾಡಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ. ಎಂಎ ಸಲೀಂ ಆದೇಶಿಸಿದ್ದಾರೆ.

ಮಂಗಳವಾರ ಹೊರಡಿಸಲಾದ ಆದೇಶದ ಪ್ರಕಾರ, ಎಸ್‌ಐಟಿಯಲ್ಲಿ ಎಸ್‌ಪಿ ಶ್ರೇಣಿಯ ಅಧಿಕಾರಿ, ಇಬ್ಬರು ಉಪ ಪೊಲೀಸ್ ವರಿಷ್ಠಾಧಿಕಾರಿಗಳು, ಐದು ಪೊಲೀಸ್ ಇನ್ಸ್‌ಪೆಕ್ಟರ್‌ಗಳು, ಏಳು ಸಬ್ ಇನ್ಸ್‌ಪೆಕ್ಟರ್‌ಗಳು, ಒಬ್ಬ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಮತ್ತು ನಾಲ್ವರು ಹೆಡ್ ಕಾನ್‌ಸ್ಟೆಬಲ್‌ಗಳು ಇರುತ್ತಾರೆ.

ಅಧಿಕಾರಿಗಳ ಹೆಸರು ಹೀಗಿದೆ:  

ಮಂಗಳೂರು ಡಿಸಿಆರ್‌ಇ ಎಸ್‌ಪಿ ಸಿ.ಎ. ಸೈಮನ್, ಉಡುಪಿ ಸಿಎಎನ್ ಠಾಣೆಯ ಡಿವೈಎಸ್‌ಪಿ ಎ.ಸಿ. ಲೋಕೇಶ್, ದಕ್ಷಿಣ ಕನ್ನಡ ಸಿಇಎನ್ ಠಾಣೆಯ ಡಿವೈಎಸ್‌ಪಿ ಮಂಜುನಾಥ್, ಸಿಎಸ್‌ಪಿ ಪೊಲೀಸ್ ಇನ್‌ಸ್ಪೆಕ್ಟರ್‌ ಮಂಜುನಾಥ್, ಸಿಎಸ್‌ಪಿ ಇನ್‌ಸ್ಪೆಕ್ಟರ್‌ ಇ.ಸಿ. ಸಂಪತ್, ಸಿಎಸ್‌ಪಿ ಪೊಲೀಸ್ ಇನ್‌ಸ್ಪೆಕ್ಟರ್‌ ಕೆ. ಕುಸುಮಧರ್, ಶಿರಸಿ ಗ್ರಾಮಾಂತರ ಪೊಲೀಸ್ ಇನ್‌ಸ್ಪೆಕ್ಟರ್ ಮಂಜುನಾಥ ಗೌಡ, ಉಡುಪಿ, ಬೈಂದೂರು ಇನ್‌ಸ್ಪೆಕ್ಟರ್ ಪಿ.ಡಿ. ಸವಿತ್ರ ತೇಜ್, ಸಿಎಸ್‌ಪಿ ಸಬ್‌ಇನ್‌ಸ್ಪೆಕ್ಟರ್ ಕೋಕಿಲ ನಾಯಕ್, ಸಿಎಸ್‌ಪಿ ಸಬ್‌ಇನ್‌ಸ್ಪೆಕ್ಟರ್ ಶಿವಶಂಕರ್, ಉತ್ತರ ಕನ್ನಡ, ಶಿರಸಿ ಎನ್ಎಂ ಪೊಲೀಸ್ ಠಾಣೆಯ ಸಬ್‌ಇನ್‌ಸ್ಪೆಕ್ಟರ್ ರಾಜ್‌ಕುಮಾರ್ ಉಕ್ಕಳ್ಳಿ, ಉತ್ತರ ಕನ್ನಡ ಅಂಕೋಲ ಪೊಲೀಸ್ ಠಾಣೆಯ ಸಬ್‌ಇನ್‌ಸ್ಪೆಕ್ಟರ್ ಆರ್. ಸುಹಾಸ್, ಉತ್ತರ ಕನ್ನಡ ಮುಂಡಗೋಡ ಸಬ್‌ಇನ್‌ಸ್ಪೆಕ್ಟರ್ ವಿನೋದ್ ಎಸ್ ಕಾಳಪ್ಪನವರ್, ಮಂಗಳೂರು ಮೆಕ್ಸಾಂ ಠಾಣೆಯ ಪಿಎಸ್ಐ ಜೆ ಗುಣಪಾಲ್, ಉಡುಪಿ ನಗರ ಪೊಲೀಸ್ ಠಾಣೆಯ ಎಎಸ್ಐ ಶುಭಾಶ್ ಕಾಮತ್, ಉಡುಪಿ ಕೌಪ್ ಪೊಲೀಸ್ ಠಾಣೆಯ ಹೆಡ್‌ ಕಾನ್‌ಸ್ಟೆಬಲ್ ಹರೀಶ್ ಬಾಬು, ಉಡುಪಿ ಮಲ್ಪೆ ವೃತ್ತದ ಹೆಡ್‌ ಕಾನ್‌ಸ್ಟೆಬಲ್ ಪ್ರಕಾಶ್, ಉಡುಪಿ ಕುಂದಾಪುರ ನಗರ ಠಾಣೆ ಹೆಡ್‌ ಕಾನ್‌ಸ್ಟೆಬಲ್ ನಾಗರಾಜ್ ಮತ್ತು ಚಿಕ್ಕಮಗಳೂರಿನ ಎಎಂಎಸ್ ಹೆಡ್‌ ಕಾನ್‌ಸ್ಟೆಬಲ್ ದೇವರಾಜ್ ಅವರನ್ನು ನಿಯೋಜಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಾ ನಲ್ಲ ಮಧುಚಂದ್ರಕೆ ಪ್ರಕರಣ: ಪತಿ ಕೊಂದು ಜೈಲು ಸೇರಿದ್ದ ಸೋನಂ ನಡವಳಿಕೆಗೆ ಶಾಕ್