Publish Date: Sat, 22 Dec 2018 (15:08 IST)
Updated Date: Sat, 22 Dec 2018 (15:09 IST)
ಮಾಜಿ ಮುಖ್ಯಮಂತ್ರಿ ಎನ್. ಧರಂಸಿಂಗ್ ಪುತ್ರ ಹಾಗೂ ಕಲಬುರ್ಗಿ ಜಿಲ್ಲೆಯ ಜೇವರ್ಗಿ ಮತಕ್ಷೇತ್ರದ ಶಾಸಕ ಅಜಯಸಿಂಗ್ ಗೆ ಸಚಿವ ಸ್ಥಾನ ಸಿಗದ ಹಿನ್ನೆಲೆ ಮತಕ್ಷೇತ್ರದಲ್ಲಿ ಆಕ್ರೋಶ ಭುಗಿಲೆದ್ದಿದೆ.
ಅಜಯಸಿಂಗ್ ಅಭಿಮಾನಿಗಳ ಆಕ್ರೋಶ ವ್ಯಕ್ತಪಡಿಸಿದ್ದು, ಜೇವರ್ಗಿ ತಾಲೂಕಿನ ಚಿಗರಳ್ಳಿ ಕ್ರಾಸ್ ,ಜೇವರ್ಗಿಯ ವಿಜಯಪುರ ಸರ್ಕಲ್, ಸೊನ್ನ ಕ್ರಾಸ್ ಸೇರಿ ಜೇವರ್ಗಿ ತಾಲೂಕಿನ ವಿವಿಧ ಕಡೆ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ.
ಟೈರ್ ಗಳಿಗೆ ಬೆಂಕಿ ಹಚ್ಚಿ ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೆಲವರು ವಿಷ ಸೇವನೆಗೂ ಯತ್ನ ನಡೆಸಿದರು.
ರಸ್ತೆ ತಡೆಯಿಂದಾಗಿ ಬೀದರ್-ಶ್ರೀರಂಗಪಟ್ಟಣ ರಾಜ್ಯ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಂಡಿತ್ತು. ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ.