ಬೆಂಗಳೂರು: ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಚಿನ್ನಯ್ಯ ಜಾಮೀನು ಅರ್ಜಿ ವಿಚಾರಣೆ ಆದೇಶ ಸೆ.16ಕ್ಕೆ ಆದೇಶ ಕಾಯ್ದಿರಿಸಿದೆ.
ಹಲವು ವರ್ಷಗಳ ಹಿಂದೆ ಧರ್ಮಸ್ಥಳದ ಸುತ್ತಾ ಹಲವು ಶವಗಳನ್ನು ಹೂತಿಟ್ಟಿದ್ದೇನೆಂದು, ಬುರುಡೆ ಸಮೇತ ಬಂದು ದೂರು ನೀಡಿದ್ದ ಚಿನ್ನಯ್ಯ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾನೆ.
ಜಾಮೀನು ಅರ್ಜಿ ಕೋರಿ ಚಿನ್ನಯ್ಯ ಸಲ್ಲಿಸದ್ದ ಅರ್ಜಿಯ ವಿಚಾರಣೆ ಇಂದು ಬೆಳ್ತಂಗಡಿ ಕೋರ್ಟ್‌ನಲ್ಲಿ ನಡೆಯಿತು. ಇನ್ನೂ ಚಿನ್ನಯ್ಯಗೆ ಜಾಮೀನಿಗೆ ಎಸ್‌ಐಟಿ ಪರ ವಕೀಲರು ಆಕ್ಷೇಪಣೆ ಸಲ್ಲಿಸಿದ್ದಾರೆ.
ವಿಚಾರಣೆ ಆಲಿಸಿದ ಬೆಳ್ತಂಗಡಿ ನ್ಯಾಯಾಲಯ ಸದ್ಯ ಆದೇಶವನ್ನು ಸೆ.16ಕ್ಕೆ ಆದೇಶವನ್ನು ಕಾಯ್ದಿರಿಸಿದೆ.