Publish Date: Tue, 14 Dec 2021 (20:49 IST)
Updated Date: Tue, 14 Dec 2021 (20:52 IST)
ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಅರೆಭಾಷೆ ದಿನಾಚರಣೆ ಮತ್ತು ಎನ್.ಎಸ್.ದೇವಿಪ್ರಸಾದ್ ಅವರ ಸಾಕ್ಷ್ಯಚಿತ್ರ ಪ್ರದರ್ಶನ ಮತ್ತು ಅರೆಭಾಷೆ ಸಾಂಸ್ಕøತಿಕ ಕಾರ್ಯಕ್ರಮವು ಡಿಸೆಂಬರ್, 15 ರಂದು ಸಂಜೆ 4 ಗಂಟೆಗೆ ನಗರದ ಭಾರತೀಯ ವಿದ್ಯಾಭವನದಲ್ಲಿ ನಡೆಯಲಿದೆ.
ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಲಕ್ಷ್ಮೀನಾರಾಯಣ ಕಜೆಗದ್ದೆ, ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷರಾದ ಸೂರ್ತಲೆ ಸೋಮಣ್ಣ, ಮೈಸೂರು ಚಾಮರಾಜ ಜೋಡಿ ರಸ್ತೆಯ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನ ಉಪನ್ಯಾಸಕರಾದ ಪಟ್ಟಡ ಶಿವಕುಮಾರ್ ಇತರರು ಪಾಲ್ಗೊಳ್ಳಲಿದ್ದಾರೆ.