Publish Date: Sat, 10 Feb 2018 (17:46 IST)
Updated Date: Sat, 10 Feb 2018 (17:47 IST)
ಬಿಜೆಪಿ ಪಕ್ಷದಲ್ಲಿ ಎಲ್.ಕೆ. ಅಡ್ವಾಣಿ ಅವರನ್ನು ಮೂಲೆಗುಂಪು ಮಾಡಲಿಲ್ಲವೇ ಎಂದು ಮಾಜಿ ಸಚಿವ ಅಂಬರೇಶ್ ಪ್ರಧಾನಮಂತ್ರಿ ನರೇಂದ್ರಮೋದಿ ಅವರಿಗೆ ತಿರುಗೇಟು ನೀಡಿದ್ದಾರೆ.
ಹೊಸಪೇಟೆಯಲ್ಲಿ ಹಮ್ಮಿಕೊಂಡಿದ್ದ ಜನಾಶೀರ್ವಾದ ಯಾತ್ರೆಯಲ್ಲಿ ಮಾತನಾಡಿದ ಅವರು, ನರೇಂದ್ರಮೋದಿ ಅವರು ಸರ್ದಾರ್ ವಲ್ಲಭಬಾಯಿ ಪಟೇಲ್ ಅವರನ್ನು ಕಾಂಗ್ರೆಸ್ ಮೂಲೆ ಗುಂಪು ಮಾಡಿದೆ ಎಂದು ಆರೋಪಿಸಿದ್ದಾರೆ. ಕಾಂಗ್ರೆಸ್ ಬಗ್ಗೆ ಮಾತನಾಡಲು ಅವರಿಗೆ ನೈತಿಕತೆ ಇಲ್ಲ ಎಂದಿದ್ದಾರೆ.
ಎಲ್.ಕೆ.ಅಡ್ವಾಣಿ ಅವರನ್ನು ಮೂಲೆಗುಂಪು ಮಾಡಿದವರು ಕಾಂಗ್ರೆಸ್ ಬಗ್ಗೆ ಆರೋಪ ಮಾಡುವುದರಲ್ಲಿ ಅರ್ಥವಿಲ್ಲ ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.