Publish Date: Sun, 14 May 2023 (09:01 IST)
Updated Date: Sun, 14 May 2023 (09:03 IST)
ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭೂತಪೂರ್ವ ಗೆಲುವು ಸಾಧಿಸಿದ್ದಕ್ಕೆ ಕ್ರಿಕೆಟಿಗ ವಿರಾಟ್ ಕೊಹ್ಲಿ ಕಾಂಗ್ರೆಸ್ ಮುಖ್ಯಸ್ಥ ರಾಹುಲ್ ಗಾಂಧಿಯನ್ನು ಅಭಿನಂದಿಸಿದ್ರಾ?! ಹೀಗೊಂದು ಪೋಸ್ಟ್ ಈಗ ವೈರಲ್ ಆಗಿದೆ.
ಕೊಹ್ಲಿ ಕಾಂಗ್ರೆಸ್ ಗೆಲುವಿಗೆ ರಾಹುಲ್ ಗಾಂಧಿಯನ್ನು ಹೊಗಳಿರುವ ಪೋಸ್ಟ್ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದನ್ನು ನೋಡಿ ನೆಟ್ಟಿಗರಿಗೂ ಅಚ್ಚರಿಯಾಗಿದೆ.
ಆದರೆ ಇದು ಅಸಲಿ ಅಲ್ಲ. ಯಾರೋ ಕೊಹ್ಲಿ ಹೆಸರಿನಲ್ಲಿ ರಾಹುಲ್ ಗಾಂಧಿಯನ್ನು ಹೊಗಳಿದಂತೆ ನಕಲಿ ಪೋಸ್ಟ್ ಹರಿಯಬಿಟ್ಟು ವೈರಲ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.