Publish Date: Fri, 26 Jul 2019 (09:48 IST)
Updated Date: Fri, 26 Jul 2019 (09:51 IST)
ಬೆಂಗಳೂರು : ಮೂವರು ಅತೃಪ್ತ ಶಾಸಕರನ್ನು ಸ್ಪೀಕರ್ ಅನರ್ಹಗೊಳಿಸಿರುವುದನ್ನು ಸ್ವಾಗತಿಸುವುದಾಗಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್ ಮೂಲಕ ತಿಳಿಸಿದ್ದಾರೆ.
ಪಕ್ಷಾಂತರ ಚಟುವಟಿಕೆ ನಡೆಸಿದ ಹಿನ್ನೆಲೆಯಲ್ಲಿ ಶೆಡ್ಯೂಲ್ 10ರ ಪ್ರಕಾರ ಕಾಂಗ್ರೆಸ್ನ ಮೂವರು ಶಾಸಕರಾದ ರಾಣೇಬೆನ್ನೂರು ಶಾಸಕ ಆರ್.ಶಂಕರ್, ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ, ಅಥಣಿ ಶಾಸಕ ಮಹೇಶ್ ಕುಮಟಳ್ಳಿಯವರನ್ನು ಸ್ಪೀಕರ್ ರಮೇಶ್ ಕುಮಾರ್ ನಿನ್ನೆ ಅನರ್ಹಗೊಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, "ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾದ ನಮ್ಮ ಪಕ್ಷದ ಮೂವರು ಶಾಸಕರನ್ನು ಅನರ್ಹಗೊಳಿಸಿದ ಮಾನ್ಯ ಸಭಾಧ್ಯಕ್ಷರ ನಿರ್ಣಯವನ್ನು ಸ್ವಾಗತಿಸುತ್ತೇನೆ. ಪ್ರಜಾಪ್ರಭುತ್ವದ ರಕ್ಷಣೆಗಾಗಿ ಇಂಥ ಕಠಿಣ ನಿರ್ಣಯಗಳು ಅತ್ಯಗತ್ಯ. ಸ್ವಾರ್ಥ ಸಾಧನೆಗಾಗಿ ಜನಾದೇಶವನ್ನು ಉಲ್ಲಂಘಿಸುವವರಿಗೆ ಈ ಐತಿಹಾಸಿಕ ನಿರ್ಣಯ ಎಚ್ಚರಿಕೆಯ ಗಂಟೆಯಾಗಲಿದೆ" ಎಂದು ತಿಳಿಸಿದ್ದಾರೆ.