Webdunia - Bharat's app for daily news and videos

Install App

ಮೂವರು ಶಾಸಕರನ್ನು ಸ್ಪೀಕರ್ ಅನರ್ಹಗೊಳಿಸಿರುವುದಕ್ಕ ಸಿದ್ದರಾಮಯ್ಯ ಹೇಳಿದ್ದೇನು?

Webdunia
ಶುಕ್ರವಾರ, 26 ಜುಲೈ 2019 (09:48 IST)
ಬೆಂಗಳೂರು : ಮೂವರು ಅತೃಪ್ತ ಶಾಸಕರನ್ನು ಸ್ಪೀಕರ್ ಅನರ್ಹಗೊಳಿಸಿರುವುದನ್ನು ಸ್ವಾಗತಿಸುವುದಾಗಿ ಕಾಂಗ್ರೆಸ್​ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್ ಮೂಲಕ ತಿಳಿಸಿದ್ದಾರೆ.




ಪಕ್ಷಾಂತರ ಚಟುವಟಿಕೆ ನಡೆಸಿದ ಹಿನ್ನೆಲೆಯಲ್ಲಿ ಶೆಡ್ಯೂಲ್​ 10ರ ಪ್ರಕಾರ ಕಾಂಗ್ರೆಸ್​ನ ಮೂವರು​ ಶಾಸಕರಾದ ರಾಣೇಬೆನ್ನೂರು ಶಾಸಕ ಆರ್.ಶಂಕರ್, ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ, ಅಥಣಿ ಶಾಸಕ ಮಹೇಶ್ ಕುಮಟಳ್ಳಿಯವರನ್ನು ಸ್ಪೀಕರ್​ ರಮೇಶ್​ ಕುಮಾರ್ ನಿನ್ನೆ  ಅನರ್ಹಗೊಳಿಸಿದ್ದಾರೆ.


ಈ ಬಗ್ಗೆ ಟ್ವೀಟ್​ ಮಾಡಿರುವ ಸಿದ್ದರಾಮಯ್ಯ ಅವರು, "ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾದ ನಮ್ಮ‌ ಪಕ್ಷದ ಮೂವರು ಶಾಸಕರನ್ನು ಅನರ್ಹಗೊಳಿಸಿದ ಮಾನ್ಯ ಸಭಾಧ್ಯಕ್ಷರ ನಿರ್ಣಯವನ್ನು ಸ್ವಾಗತಿಸುತ್ತೇನೆ. ಪ್ರಜಾಪ್ರಭುತ್ವದ ರಕ್ಷಣೆಗಾಗಿ ಇಂಥ ಕಠಿಣ ನಿರ್ಣಯಗಳು ಅತ್ಯಗತ್ಯ. ಸ್ವಾರ್ಥ ಸಾಧನೆಗಾಗಿ ಜನಾದೇಶವನ್ನು ಉಲ್ಲಂಘಿಸುವವರಿಗೆ ಈ ಐತಿಹಾಸಿಕ ನಿರ್ಣಯ ಎಚ್ಚರಿಕೆಯ ಗಂಟೆಯಾಗಲಿದೆ" ಎಂದು ತಿಳಿಸಿದ್ದಾರೆ.


 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments