Publish Date: Wed, 14 Jun 2023 (08:20 IST)
Updated Date: Wed, 14 Jun 2023 (10:21 IST)
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಅವರು ಇದೀಗ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಸರಣಿ ಟ್ವೀಟ್ ಮಾಡುವ ಮೂಲಕ ಹತ್ತನೇ ನಂಬರಿನ ಹಂಗಿನ ಸರ್ಕಾರ ಎದು ಹ್ಯಾಶ್ ಟ್ಯಾಗ್ ಬಳಸಿ ವಾಗ್ದಾಳಿ ನಡೆಸಿದ್ದಾರೆ.
ರಾಜ್ಯದಲ್ಲಿರುವುದು ಶ್ರೀ ಸಿದ್ದರಾಮಯ್ಯನವರ ನೇತೃತ್ವದ ಸರಕಾರವೋ ಅಥವಾ ದಿಲ್ಲಿಯ ಜನಪಥ ರಸ್ತೆಯ 10ನೇ ನಂಬರಿನ ಹಂಗಿನ ಸರಕಾರವೋ? ಕನ್ನಡಿಗರು ಮತ ಹಾಕಿದ್ದು ಕೈ ಸರಕಾರಕ್ಕಾ?ಅಥವಾ ಕೈಗೊಂಬೆ ಸರಕಾರಕ್ಕಾ?
ಪಾಪ.. ಜನರ ವೋಟು ಹಂಗಿನ ಸರಕಾರದ ಪಾಲಾಗಿದೆ.ಸರಕಾರಕ್ಕೆ ತಿಂಗಳು ತುಂಬುವ ಮೊದಲೇ ಅದು ಸಾಬೀತಾಗಿದೆ.