Select Your Language

Notifications

webdunia
webdunia
webdunia
webdunia

'ಕಡ್ಲೆಪುರಿ ತಿನ್ನುತ್ತಿದ್ದರಾ?'

'Did you eat Kadlepuri
ಕಾಂಗ್ರೆಸ್ ಭ್ರಷ್ಟಾಚಾರದ ಕಡತಗಳನ್ನ ತೆಗೆಯುತ್ತೇವೆ ಎಂಬ ಬಿಜೆಪಿ ನಾಯಕರ ಹೇಳಿಕೆ ವಿಚಾರಕ್ಕೆ ಸಂಬಂಧಿಸಿ ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು ಕೊಟ್ಟಿದ್ದಾರೆ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಎಷ್ಟು ವರ್ಷವಾಗಿದೆ. ಈ ಹಿಂದೆ ವಿರೋಧ ಪಕ್ಷದಲ್ಲಿ ಬಿಜೆಪಿಯವರು ಇರಲಿಲ್ವಾ? ಆಗ ಏಕೆ ಇವರು ಭ್ರಷ್ಟಾಚಾರದ ಬಗ್ಗೆ ಕೇಳಿಲ್ಲವೆಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ. ನಿಮ್ಮ ಬಾಯಲ್ಲಿ ಕಡುಬು ಸಿಕ್ಕಿಹಾಕಿಕೊಂಡಿತ್ತಾ? ಇಷ್ಟು ದಿನ ಬಿಜೆಪಿ ನಾಯಕರು ಕಡ್ಲೆಪುರಿ ತಿನ್ನುತ್ತಿದ್ದರಾ? ನಾವು ಈಗ ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತಿದ್ದೇವೆ. ಈ ಸಂದರ್ಭದಲ್ಲಿ ಅವರು ಇದನ್ನು ಹೇಳಿದ್ರೆ ಜನ ನಂಬ್ತಾರಾ? ಭ್ರಷ್ಟಾಚಾರ ವಿಚಾರ ಗೊತ್ತಿದ್ದರೂ ಮುಚ್ಚಿಡುವುದು ಅಪರಾಧ. ಇದು ರಾಜ್ಯ ಬಿಜೆಪಿ ಸರ್ಕಾರಕ್ಕೆ ಗೊತ್ತಿಲ್ಲವಾ? ಜನರಿಗೆ ಇದೆಲ್ಲವೂ ಅರ್ಥವಾಗುತ್ತಿದೆ ಎಂದು ಮೈಸೂರಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

'ಕಾರ್ಯಕಾರಿಣಿಯಿಂದ ಬಿಜೆಪಿಗೆ ಶಕ್ತಿ'