Select Your Language

Notifications

webdunia
webdunia
webdunia
webdunia

ಬಿಜೆಪಿ ಹೈಕಮಾಂಡಿಗೆ ₹1800 ಕೋಟಿ ಕಪ್ಪ ನೀಡಿದ್ದನ್ನಾ ಮರೆತ್ರಾ: ಕೆದಿಕಿದ ರಾಘವೇಂದ್ರಗೆ ಪ್ರಿಯಾಂಕ್ ಖರ್ಗೆ ಕೌಂಟರ್

Minister Priyank Kharge

Sampriya

ಬೆಂಗಳೂರು , ಮಂಗಳವಾರ, 21 ಅಕ್ಟೋಬರ್ 2025 (18:08 IST)
ಬೆಂಗಳೂರು:  ಬಿಹಾರ ಚುನಾವಣೆಗೆ ಕರ್ನಾಟಕದಿಂದ ಹಣ ಹೋಗುತ್ತಿದೆ ಎಂಬ ಸಂಸದ ಬಿವೈ ರಾಘವೇಂದ್ರ ಆರೋಪ ಸಂಬಂಧ ಸಚಿವ ಪ್ರಿಯಾಂಕ್ ಖರ್ಗೆ ಅವರು ಹಳೆ ವಿಚಾರವನ್ನು ಕೆದಕಿ ಕೌಂಟರ್ ನೀಡಿದ್ದಾರೆ. 

ಈ ಸಂಬಂಧ ಪ್ರಿಯಾಂಕ್ ಖರ್ಗೆ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ. 

ಪೋಸ್ಟ್‌ನಲ್ಲಿ ಹೀಗಿದೆ: 

ಬಿಜೆಪಿ ಹೈಕಮಾಂಡಿಗೆ ₹1800 ಕೋಟಿ ಕಪ್ಪ ನೀಡಿದ್ದನ್ನು ಶ್ರೀ ಯಡಿಯೂರಪ್ಪನವರು ಹಾಗೂ ದಿ. ಶ್ರೀ ಅನಂತ್ ಕುಮಾರ್ ಅವರ ಸಂಭಾಷಣೆಯಲ್ಲಿ ಬಹಿರಂಗವಾಗಿದ್ದನ್ನು ಬಿಜೆಪಿ ನಾಯಕರು ಮರೆತಿದ್ದಾರೆಯೇ?
ಮರೆತಿದ್ದರೆ, ನಾವು ಮತ್ತೊಮ್ಮೆ ನೆನಪಿಸುತ್ತಿದ್ದೇವೆ.

ಸಂಸದ ಬಿ.ವೈ ರಾಘವೇಂದ್ರರವರು ತಮ್ಮ ಪೂಜ್ಯ ತಂದೆಯವರ ಮಾತುಗಳನ್ನು ಒಮ್ಮೆ ಕಿವಿಗೊಟ್ಟು ಕೇಳಿಸಿಕೊಂಡು ನಂತರ ಮಾತನಾಡಿದರೆ ಉತ್ತಮ.

ಬಿಜೆಪಿಯಲ್ಲಿ ಮುಖ್ಯಮಂತ್ರಿ ಹುದ್ದೆಗೆ ₹2,500 ಕೊಡಬೇಕು ಎಂದಿದ್ದವರೂ ಬಿಜೆಪಿಯವರೇ,
ಮಂತ್ರಿಗಿರಿಗೆ 60, 70 ಕೋಟಿ ಕೊಡಬೇಕು ಎಂದಿದ್ದವರೂ ಬಿಜೆಪಿಯವರೇ.

ಬಿಜೆಪಿ ಹೈಕಮಾಂಡ್ ಹುದ್ದೆಗಳನ್ನು ಮಾರಾಟಕ್ಕಿಟ್ಟು ವ್ಯಾಪಾರಕ್ಕೆ ಕುಳಿತಿತ್ತು ಎನ್ನುವುದನ್ನು ಬಿಜೆಪಿಯವರೇ ಬಹಿರಂಗಪಡಿಸಿದ್ದರು.

ಕರ್ನಾಟಕದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾಡಿದ ಕೀರ್ತಿ ಬಿಜೆಪಿಯದ್ದೇ ಹೊರತು ಕಾಂಗ್ರೆಸ್ಸಿನದ್ದಲ್ಲ.

Share this Story:

Follow Webdunia kannada

ಮುಂದಿನ ಸುದ್ದಿ

ಮೋದಿಗೆ ರಾಜ್ಯದ ಮೇಲೆ ಸಿಟ್ಟು, ಅಮವಾಸ್ಯೆ ತೇಜಸ್ವಿಯೂ ಕೇಂದ್ರದಿಂದ ಹಣ ತರಲ್ಲ: ಸಿದ್ದರಾಮಯ್ಯ