ಬಿಜೆಪಿ ಹೈಕಮಾಂಡಿಗೆ ₹1800 ಕೋಟಿ ಕಪ್ಪ ನೀಡಿದ್ದನ್ನಾ ಮರೆತ್ರಾ: ಕೆದಿಕಿದ ರಾಘವೇಂದ್ರಗೆ ಪ್ರಿಯಾಂಕ್ ಖರ್ಗೆ ಕೌಂಟರ್

Sampriya
ಮಂಗಳವಾರ, 21 ಅಕ್ಟೋಬರ್ 2025 (18:08 IST)
ಬೆಂಗಳೂರು:  ಬಿಹಾರ ಚುನಾವಣೆಗೆ ಕರ್ನಾಟಕದಿಂದ ಹಣ ಹೋಗುತ್ತಿದೆ ಎಂಬ ಸಂಸದ ಬಿವೈ ರಾಘವೇಂದ್ರ ಆರೋಪ ಸಂಬಂಧ ಸಚಿವ ಪ್ರಿಯಾಂಕ್ ಖರ್ಗೆ ಅವರು ಹಳೆ ವಿಚಾರವನ್ನು ಕೆದಕಿ ಕೌಂಟರ್ ನೀಡಿದ್ದಾರೆ. 

ಈ ಸಂಬಂಧ ಪ್ರಿಯಾಂಕ್ ಖರ್ಗೆ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ. 

ಪೋಸ್ಟ್‌ನಲ್ಲಿ ಹೀಗಿದೆ: 

ಬಿಜೆಪಿ ಹೈಕಮಾಂಡಿಗೆ ₹1800 ಕೋಟಿ ಕಪ್ಪ ನೀಡಿದ್ದನ್ನು ಶ್ರೀ ಯಡಿಯೂರಪ್ಪನವರು ಹಾಗೂ ದಿ. ಶ್ರೀ ಅನಂತ್ ಕುಮಾರ್ ಅವರ ಸಂಭಾಷಣೆಯಲ್ಲಿ ಬಹಿರಂಗವಾಗಿದ್ದನ್ನು ಬಿಜೆಪಿ ನಾಯಕರು ಮರೆತಿದ್ದಾರೆಯೇ?
ಮರೆತಿದ್ದರೆ, ನಾವು ಮತ್ತೊಮ್ಮೆ ನೆನಪಿಸುತ್ತಿದ್ದೇವೆ.

ಸಂಸದ ಬಿ.ವೈ ರಾಘವೇಂದ್ರರವರು ತಮ್ಮ ಪೂಜ್ಯ ತಂದೆಯವರ ಮಾತುಗಳನ್ನು ಒಮ್ಮೆ ಕಿವಿಗೊಟ್ಟು ಕೇಳಿಸಿಕೊಂಡು ನಂತರ ಮಾತನಾಡಿದರೆ ಉತ್ತಮ.

ಬಿಜೆಪಿಯಲ್ಲಿ ಮುಖ್ಯಮಂತ್ರಿ ಹುದ್ದೆಗೆ ₹2,500 ಕೊಡಬೇಕು ಎಂದಿದ್ದವರೂ ಬಿಜೆಪಿಯವರೇ,
ಮಂತ್ರಿಗಿರಿಗೆ 60, 70 ಕೋಟಿ ಕೊಡಬೇಕು ಎಂದಿದ್ದವರೂ ಬಿಜೆಪಿಯವರೇ.

ಬಿಜೆಪಿ ಹೈಕಮಾಂಡ್ ಹುದ್ದೆಗಳನ್ನು ಮಾರಾಟಕ್ಕಿಟ್ಟು ವ್ಯಾಪಾರಕ್ಕೆ ಕುಳಿತಿತ್ತು ಎನ್ನುವುದನ್ನು ಬಿಜೆಪಿಯವರೇ ಬಹಿರಂಗಪಡಿಸಿದ್ದರು.

ಕರ್ನಾಟಕದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾಡಿದ ಕೀರ್ತಿ ಬಿಜೆಪಿಯದ್ದೇ ಹೊರತು ಕಾಂಗ್ರೆಸ್ಸಿನದ್ದಲ್ಲ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್‌ಎಸ್‌ಎಸ್‌ ಬಗ್ಗೆ ಪ್ರಿಯಾಂಕ್ ಖರ್ಗೆ ಟೀಕೆ ಹಿಂದಿದೆ ಮಹಾ ಉದ್ದೇಶ: ವಿಜಯೇಂದ್ರ

ದೀಪಾವಳಿ ದಿನ ದೆಹಲಿಯಲ್ಲಿ ಅಗ್ನಿ ಶಾಮಕ ಸೇವೆಗೂ ಊಹಿಸಕ್ಕೂ ಮೀರಿದ ಕರೆ

ಬಿಜೆಪಿ, ಜೆಡಿಎಸ್ ಪಕ್ಷದ ಸಮನ್ವಯ ಸಮಿತಿ ಶೀಘ್ರ ರಚನೆ: ಬಿವೈ ವಿಜಯೇಂದ್ರ

ದೆಹಲಿಯಲ್ಲಿ ಹದಗೆಟ್ಟ ವಾಯು ಗುಣಮಟ್ಟ, ಆರೋಗ್ಯದ ಮೇಲೆ ಬೀಳಲಿದೆ ದೊಡ್ಡ ಪರಿಣಾಮ

ಪ್ರಧಾನಿ ನರೇಂದ್ರ ಮೋದಿ ಬೆಂಗಳೂರು ಅಭಿವೃಧಿಗೆ ಒಂದು ಪೈಸೆಯೂ ನೀಡಿಲ್ಲ: ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments