Webdunia - Bharat's app for daily news and videos

Install App

ಸಗಟು ಖರೀದಿಗೆ ಡೀಸೆಲ್ ದರ 25 ರೂ. ಏರಿಕೆ; ಪ್ರಮುಖ ನಗರಗಳ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ?

Webdunia
ಸೋಮವಾರ, 21 ಮಾರ್ಚ್ 2022 (19:17 IST)
ಭಾರತದ ತೈಲ ಕಂಪನಿಗಳು ಇಂದು ಬೆಳಗ್ಗೆ ಪೆಟ್ರೋಲ್​- ಡೀಸೆಲ್​ ಬೆಲೆಯನ್ನು ಬಿಡುಗಡೆ ಮಾಡಿದೆ. ದೊಡ್ಡ ಪ್ರಮಾಣದಲ್ಲಿ ಡೀಸೆಲ್ ಖರೀದಿ ಮಾಡುವವರಿಗೆ ಜಾಗತಿಕ ತೈಲ ದರ ಏರಿಕೆ ಆಗಿದೆ. ಅಂತಾರಾಷ್ಟ್ರೀಯ ತೈಲ ದರವು ಶೇಕಡಾ 40 ರಷ್ಟು ಹೆಚ್ಚಳವಾಗಿದೆ. ಹೀಗಾಗಿ ಭಾರತದಲ್ಲಿ ಡೀಸೆಲ್ ಸಗಟು ಖರೀದಿ ದರ ಲೀಟರ್​ಗೆ 25 ರೂಪಾಯಿ ಹೆಚ್ಚಿಸಲಾಗಿದೆ. ಬಲ್ಕ್ ಆಗಿ, ದೊಡ್ಡ ಪ್ರಮಾಣದಲ್ಲಿ ಡೀಸೆಲ್ ಖರೀದಿ ಮಾಡುವವರಿಗೆ ಇದು ಅನ್ವಯವಾಗಲಿದೆ. ಆದರೆ, ಜನಸಾಮಾನ್ಯರು ಸಣ್ಣ ಪ್ರಮಾಣದಲ್ಲಿ ಕೊಳ್ಳುವ ಡೀಸೆಲ್ ಬೆಲೆಯಲ್ಲಿ ಯಾವುದೇ ಹೆಚ್ಚಳ ಆಗಿಲ್ಲ. ಇಂದು (ಮಾರ್ಚ್  21, ಸೋಮವಾರ) ಇಂಧನಗಳ ದರದಲ್ಲಿ(Fuel Rate) ಯಾವುದೇ ಬದಲಾವಣೆಯಾಗಿಲ್ಲ. ತೈಲ ಕಂಪನಿಗಳು ಪ್ರತಿದಿನ ಬೆಳಗ್ಗೆಯೇ ವಿವಿಧ ಪ್ರಮುಖ ನಗರಗಳ ಪೆಟ್ರೋಲ್​-ಡೀಸೆಲ್​ ಬೆಲೆಯನ್ನು ಬಿಡುಗಡೆ ಮಾಡುತ್ತವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲಕ್ಕೆ ಇರುವ ಬೆಲೆ ಆಧಾರದಲ್ಲಿ ಪೆಟ್ರೋಲ್​-ಡೀಸೆಲ್​ ಬೆಲೆ ನಿರ್ಧರಿಸಲಾಗುತ್ತದೆ. ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 95.41 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.67 ರೂಪಾಯಿ ಇದೆ.
 
ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.01 ರೂಪಾಯಿ ದಾಖಲಾಗಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ಇದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.40 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 91.59 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 104.67 ರೂಪಾಯಿ ಹಾಗೂ ಲೀಟರ್ ಡೀಸೆಲ್ ಡೀಸೆಲ್ ದರ 89.79 ರೂಪಾಯಿ ನಿಗದಿಯಾಗಿದೆ.ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 108.20 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.62 ರೂಪಾಯಿ ನಿಗದಿಯಾಗಿದೆ. ಗುಜರಾತ್​ನ ಗಾಂಧಿನಗರದಲ್ಲಿ ಲೀಟರ್ ಪೆಟ್ರೋಲ್ ದರ 95.35 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.33 ರೂಪಾಯಿ ನಿಗದಿಯಾಗಿದೆ. ಕೇರಳದ ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್ಗೆ 106.36 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 93.47 ರೂಪಾಯಿ ನಿಗದಿಯಾಗಿದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 95.28 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.
 
ಶ್ರೀಗಂಗಾನಗರದಲ್ಲಿ ಲೀಟರ್ ಪೆಟ್ರೋಲ್​ಗೆ 114.01 ರೂಪಾಯಿ ಹಾಗೂ ಲೀಟರ್ ಡೀಸೆಲ್ಗೆ 98.39 ರೂಪಾಯಿ ದಾಖಲಾಗಿದೆ. ಭೋಪಾಲ್ನಲ್ಲಿ ಲೀಟರ್ ಪೆಟ್ರೋಲ್ ದರ 107.23 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.87 ರೂಪಾಯಿ ಇದೆ. ಗುವಾಹಟಿಯಲ್ಲಿ ಲೀಟರ್ ಪೆಟ್ರೋಲ್ ದರ 94.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.
 
ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ:
 
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಆರ್ ಎಸ್ಎಸ್ ಹೊಗಳಿದ್ದಕ್ಕೆ ಸಿದ್ದರಾಮಯ್ಯ ಸಿಟ್ಟು

ನನ್ನನ್ನು ಕೆಳಗಿಳಿಸಲು ದೆಹಲಿಯಲ್ಲಿ ವ್ಯವಸ್ಥಿತವಾದ ಸಂಚು ನಡೆದಿದೆ: ಕೆಎನ್‌ ರಾಜಣ್ಣ ‌ಕಿಡಿ

ಸ್ವಾತಂತ್ರ್ಯ ದಿನಾಚರಣೆಯಂದೆ ಮಹಿಳೆಯರಿಗೆ ಭರ್ಜರಿ ಗಿಫ್ಟ್‌ ನೀಡಿದ ಆಂಧ್ರ ಸಿಎಂ

ತಿರುನೆಲ್ವೇಲಿಯಿಂದ ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಬೆಂಗಳೂರು ಸ್ಪೋಟ: 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments