Publish Date: Fri, 17 Aug 2018 (20:57 IST)
Updated Date: Fri, 17 Aug 2018 (20:59 IST)
ಅಗಲಿದ ಮಾಜಿ ಪ್ರಧಾನಿ, ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ನಿಧನಕ್ಕೆ ಖ್ಯಾತ ಮರಳು ಶಿಲ್ಪ ಕಲಾವಿದ ಸುದರ್ಶನ ಪಟ್ನಾಯಕ್ ಅವರು ತಮ್ಮದೇ ವಿಭಿನ್ನ ಶೈಲಿಯಲ್ಲಿ ಶ್ರದ್ಧಾಂಜಲಿ ಸಮರ್ಪಿಸಿದ್ದಾರೆ.
ಮರಳು ಶಿಲ್ಪ ಕಲಾವಿದ ಸುದರ್ಶನ ಪಟ್ನಾಯಕ ಅವರು ಅಗಲಿದ ಹಿರಿಯ ಬಿಜೆಪಿ ನಾಯಕ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ನಿಧನಕ್ಕೆ ವಿಶೇಷವಾಗಿ ಶೋಕ ಸಮರ್ಪಿಸಿದ್ದಾರೆ. ಮರಳಿನಲ್ಲಿ ವಾಜಪೇಯಿ ಅವರ ಚಿತ್ರ ಬಿಡಿಸುವ ಮೂಲಕ ನಮನ ಸಲ್ಲಿಸಿದ್ದಾರೆ.
ಬೆಂಗಳೂರಿನ ಮಾರತಹಳ್ಳಿಯಲ್ಲಿ ವಾಗ್ದೇವಿ ಕಲಾ ಉತ್ಸವ ಹಮ್ಮಿಕೊಳ್ಳಲಾಗಿತ್ತು. ಆದರೆ ಅಟಲ್ ಬಿಹಾರಿ ವಾಜಪೇಯಿ ಅವರ ನಿಧನದಿಂದಾಗಿ ಉತ್ಸವವನ್ನು ಮುಂದೂಡಲಾಗಿದೆ. ಏತನ್ಮಧ್ಯೆ ಪಟ್ನಾಯಕ್, ವಾಜಪೇಯಿ ಅವರ ಚಿತ್ರವನ್ನು ಮರಳಿನಲ್ಲಿ ಬಿಡಿಸಿ ಶ್ರದ್ಧಾಂಜಲಿ ಅರ್ಪಣೆ ಮಾಡಿದರು.