ಬಡವರ ಕಾರ್ಯಕ್ರಮಗಳಿಗೆ ತೊಂದರೆ ಕೊಡಬೇಕೆಂದು ಕೇಂದ್ರ ಸರ್ಕಾರ ಅಕ್ಕಿ ಕೊಡಲು ನಿರಾಕರಿಸಿದೆ. ಅವರ ಬಳಿ ಲಕ್ಷ ಟನ್ಗಟ್ಟಲೆ ಅಕ್ಕಿ ಇದೆ.
ಅದನ್ನ ಖಾಸಗಿಯವರಿಗೆ ಹರಾಜು ಮಾಡ್ತಿದ್ದಾರೆ ಹೊರತು ರಾಜ್ಯಗಳಿಗೆ ಕೊಡುತ್ತಿಲ್ಲ. ಪ್ರತಿ ಕೆಜಿ ಅಕ್ಕಿಗೆ 36.70 ರೂ. ಕೊಡಲು ಒಪ್ಪಿದರೂ ಅಕ್ಕಿ ಕೊಡುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
5 ಗ್ಯಾರಂಟಿ ಯೋಜನೆಗಳ ಪೈಕಿ ಈಗಾಗಲೇ ಒಂದು ಯೋಜನೆಗೆ ಚಾಲನೆ ನೀಡಲಾಗಿದೆ. ಜುಲೈ 1ರಿಂದ ಉಚಿತ ವಿದ್ಯುತ್ ಯೋಜನೆ ಜಾರಿಗೆ ಬರಲಿದೆ. ಅಕ್ಕಿಯನ್ನೂ ನೀಡಬೇಕೆಂಬ ಉದ್ದೇಶವಿದ್ದರೂ ಅಕ್ಕಿ ದೊರೆಯುತ್ತಿಲ್ಲ. ದೊರೆತರೂ ಹೆಚ್ಚಿನ ದರ ಕೇಳುತ್ತಾರೆ. 2.28 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಎಲ್ಲಿಯೂ ಸಿಗುತ್ತಿಲ್ಲ.
ಎಲ್ಲ ರಾಜ್ಯದವರಿಂದಲೂ ಪೂರ್ಣಪ್ರಮಾಣದ ಅಕ್ಕಿ ದೊರೆಯುತ್ತಿಲ್ಲವಾದ್ದರಿಂದ ಬೇರೆ ಸರ್ಕಾರಿ ಏಜೆನ್ಸಿಗಳಿಂದ ಎನ್ಸಿಸಿಎಫ್ ನಿಂದ ಕೇಂದ್ರೀಯ ಭಂಡಾರ್, ನ್ಯಾಫೆಡ್ ಸಂಸ್ಥೆಗಳಿಂದ ದರಪಟ್ಟಿ ಕರೆಯಲಾಗಿದ್ದು, ಮಾತುಕತೆ ನಡೆದಿದೆ. ಈ ಬಗ್ಗೆ ಮಾತುಕತೆ ನಡೆಸಿ ಎಷ್ಟು ಅಕ್ಕಿ? ದರ ಎಷ್ಟು? ಎನ್ನುವ ಬಗ್ಗೆ ತೀರ್ಮಾನ ಮಾಡಲಾಗುತ್ತದೆ.