ಪ್ರಯಾಗ್‌ರಾಜ್: ಇಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಪುತ್ರಿ ಐಶ್ವರ್ಯ ಪಾಲ್ಗೊಂಡು, ತ್ರಿವೇಣಿ ಸಂಗಮದಲ್ಲಿ ಪವಿತ್ರಸ್ನಾನ ಮಾಡಿದ್ದಾರೆ.
ಭಕ್ತಿಯ ಕ್ಷಣಗಳನ್ನು ಐಶ್ವರ್ಯ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಕುಂಭಮೇಳದಲ್ಲಿ ಕಳೆದ ಅದ್ಭುತ ಕ್ಷಣಗಳ ವೀಡಿಯೋವನ್ನು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಐಶ್ವರ್ಯ ಹಂಚಿಕೊಂಡಿದ್ದಾರೆ.
ಇದೇ 9 ಹಾಗೂ 10ರಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಕುಂಭಮೇಳಕ್ಕೆ ತೆರಳಿ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಲಿದ್ದಾರೆ. ತಂದೆಯ ಭೇಟಿಗೂ ಮುನ್ನಾ ಐಶ್ವರ್ಯ ಭೇಟಿ ಕೊಟ್ಟು, ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದ್ದಾರೆ.
ಜಗತ್ತಿನ ಅತಿ ದೊಡ್ಡ ಧಾರ್ಮಿಕ ಉತ್ಸವ 2025ರ ಮಹಾ ಕುಂಭಮೇಳಕ್ಕೆ ಜ.13 ರಂದು ಅದ್ದೂರಿ ಚಾಲನೆ ಸಿಕ್ಕಿದೆ. 144 ವರ್ಷಗಳ ಬಳಿಕ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಮಹಾ ಕುಂಭಮೇಳ ನಡೆಯುತ್ತಿದೆ. ಫೆ.26 ರ ವರೆಗೆ ಉತ್ಸವ ಜರುಗಲಿದೆ.