Webdunia - Bharat's app for daily news and videos

Install App

ಡಿಕೆಶಿ ಬಂಧನ ಖಂಡಿಸಿ ಚಲಿಸುತ್ತಿದ್ದ ಬಸ್ ಮೇಲೆ ಕಲ್ಲು ತೂರಾಟ

Webdunia
ಬುಧವಾರ, 4 ಸೆಪ್ಟಂಬರ್ 2019 (19:28 IST)
ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಬಂಧನ ವಿರೋಧಿಸಿ ಪ್ರತಿಭಟನೆಗೆ ಕರೆ ನೀಡಿದ ಬೆನ್ನಲ್ಲೇ ಹಲವೆಡೆ ಬಸ್ ಗಳಿಗೆ ಕಲ್ಲು ತೂರಾಟ ನಡೆಸಲಾಗಿದೆ.

ಮಂಗಳೂರಿನ ವಿವಿಧೆಡೆ ಬಸ್ ಗೆ ಕಲ್ಲು ತೂರಿದ ಘಟನೆ ನಡೆದಿದೆ‌. ಮಂಗಳೂರಿನ ಫಳ್ನೀರ್ ಮತ್ತು ನಂದಿಗುಡ್ಡೆಯಲ್ಲಿ ಸಂಚರಿಸುತ್ತಿದ್ದ ಬಸ್ ಗಳ ಮೇಲೆ ಕಲ್ಲು ತೂರಾಟ ನಡೆದಿದೆ.

ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಕಂಕನಾಡಿ ಮಾರ್ಗದಿಂದ ಸ್ಟೇಟ್ ಬ್ಯಾಂಕ್ ಗೆ ತೆರಳುತ್ತಿದ್ದ ನಂ.6 ಖಾಸಗಿ ಬಸ್ ಮೇಲೂ ಕಲ್ಲು ತೂರಾಟ ನಡೆದಿದೆ. ಫಳ್ನೀರ್ ನಲ್ಲಿ ನಡೆದ ಕಲ್ಲು ತೂರಾಟದಲ್ಲಿ ಬಸ್ ನ ಗಾಜು ಸಂಪೂರ್ಣ ಪುಡಿಗಟ್ಟಿದೆ.

ಇನ್ನು ರಾತ್ರಿ ಕಾರಿನಲ್ಲಿ ಬಂದ ದುಷ್ಕರ್ಮಿಗಳು 5 ಬಸ್ ನ ಗ್ಲಾಸ್ ಗೆ ಕಲ್ಲೆಸೆದು ಪುಡಿಗೈದಿರುವ ಘಟನೆ ಕಿನ್ನಿಗೋಳಿಯಲ್ಲಿ ನಡೆದಿದೆ. ದುಷ್ಕರ್ಮಿಗಳು ಬಸ್ ನ ಗಾಜಿಗೆ ಕಲ್ಲೆಸೆಯುತ್ತಿರುವ ಕೃತ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಈ 5 ಬಸ್ ಗಳು ಕಾಂಗ್ರೆಸ್ ಮುಖಂಡ ದುರ್ಗಾಪ್ರಸಾದ್ ಎಂಬುವವರಿಗೆ ಸೇರಿದ್ದು, ಬಟ್ಟಕೋಡಿ, ಕಿನ್ನಿಗೋಳಿ, ಕಟೀಲ್ ನಲ್ಲಿ ನಿಂತಿದ್ದ ಬಸ್ಸುಗಳಿಗೆ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಕಲ್ಲೆಸೆದು ಪರಾರಿಯಾಗಿದ್ದಾರೆ. ಈ ಕೃತ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ದುಷ್ಕರ್ಮಿಗಳು ಕಾರಿನಿಂದ ಇಳಿದು ಕಲ್ಲುಗಳಿಂದ ಬಸ್ ನ ಗ್ಲಾಸ್ ನ್ನು ಪುಡಿಗೈಯುತ್ತಿರುವ ದೃಶ್ಯ ದಾಖಲಾಗಿದೆ. ಮೂಲ್ಕಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments