Webdunia - Bharat's app for daily news and videos

Install App

ಗಣಪತಿ ಮೂರ್ತಿ 2-4 ಅಡಿ ನಿರ್ಬಂಧ ಹಿಂಪಡೆಯಲು ಡಿಕೆಶಿ ಆಗ್ರಹ

Webdunia
ಗುರುವಾರ, 9 ಸೆಪ್ಟಂಬರ್ 2021 (07:31 IST)
ಬೆಂಗಳೂರು : ಗಣೇಶೋತ್ಸವ ಆಚರಣೆಗೆ ಸಜ್ಜಾಗಿರುವ ಹೊತ್ತಲ್ಲೇ ಮನೆಯಲ್ಲಿ ಎರಡು ಅತಿ, ಸಾರ್ವಜನಿಕ ಸ್ಥಳಗಳಲ್ಲಿ ನಾಲ್ಕು ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಬೇಕು ಎಂದು ಸರ್ಕಾರವು ಅರ್ಥಹೀನ ಆದೇಶ ಹೊರಡಿಸಿರುವುದು ಸರಿಯಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದ್ದರೆ.

ಈ ಕುರಿತು ಹೇಳಿಕೆ ನೀಡಿರುವ ಅವರು, ರಾಜ್ಯ ಸರ್ಕಾರವು ದಿನಕ್ಕೊಂದು ನಿರ್ಧಾರ ಕೈಗೊಳ್ಳುವ ಮೂಲಕ ಗಣೇಶ ಮೂರ್ತಿ ತಯಾರಕರ ಬದುಕಿನ ಜತೆ ಚೆಲ್ಲಾಟವಾಡಿದೆ. ತಕ್ಷಣ ಈ ಆದೇಶ ಹಿಂಪಡೆಯಬೇಕು ಅಥವಾ ಮೂರ್ತಿ ತಯಾರಿಕರಿಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಎರಡು ತಿಂಗಳಿಂದ ಗಣೇಶ ಮೂರ್ತಿ ತಯಾರಕರು ಲಕ್ಷಾಂತರ ಮೂರ್ತಿಗಳನ್ನು ಮಾಡಿದ್ದಾರೆ. ಸರ್ಕಾರ ಕೊನೆ ಕ್ಷಣದಲ್ಲಿ ಇಂತಹ ನಿರ್ಬಂಧ ಹೇರಿದರೆ ಅವರ ಸ್ಥಿತಿ ಏನಾಗಬೇಕು ಎಂದು ಪ್ರಶ್ನಿಸಿದ್ದಾರೆ.
ಕೋವಿಡ್ ಸಮಯದಲ್ಲಿ ಆದಾಯವಿಲ್ಲದಿದ್ದ ಗಣೇಶ ಮೂರ್ತಿ ತಯಾರಕರು, ತಮ್ಮ ಬಳಿ ಇದ್ದಬದ್ದ ಹಣ ಹಾಕಿ ಮೂರ್ತಿಗಳನ್ನು ತಯಾರಿಸಿದ್ದಾರೆ. ಸರ್ಕಾರ ಇದುವರೆಗೂ ಇವರಿಗೆ ನಯಾ ಪೈಸೆ ಕೋವಿಡ್ ಪರಿಹಾರ ಕೊಟ್ಟಿಲ್ಲ. ಇಂತಹ ಆದೇಶದಿಂದ ದೇವರ ಮೂರ್ತಿ ಮಾಡಿಕೊಂಡು ಜೀವನ ನಡೆಸುವವರ ಬದುಕಿಗೆ ಸರಕಾರ ಕೊಳ್ಳಿ ಇಟ್ಟಿದೆ ಎಂದು ಆಕ್ರೋಶ ಅವರು ವ್ಯಕ್ತಪಡಿಸಿದ್ದಾರೆ.
ರಾಜ್ಯ ಸರ್ಕಾರ ಗಣಪತಿ ಉತ್ಸವಕ್ಕೆ ಕಡಿವಾಣ ಹಾಕುವ ಭರದಲ್ಲಿ ಭಕ್ತ ಹಾಗೂ ಭಗವಂತನ ನಡುವೆ ಕಂದಕ ನಿರ್ಮಿಸಿರುವುದು ದುರಾದೃಷ್ಟಕರ ಸಂಗತಿ. ದೇವರಿಗೂ ನೀನು ಇಷ್ಟೇ ಎತ್ತರ ಇರಬೇಕು ಎಂದು ನಿಯಂತ್ರಣ ಹೇರುತ್ತಿದ್ದಾರೆ ಎಂದು ಟೀಕಿಸಿದ್ದಾರೆ.
ಸಾರ್ವಜನಿಕ ಸ್ಥಳಗಳಲ್ಲಿ ಹೆಚ್ಚು ಜನ ಸೇರಬಾರದು, ಮೆರವಣಿಗೆ ಮಾಡಬಾರದು ಎಂಬುದನ್ನು ಒಪ್ಪುತ್ತೇವೆ. ಆದರೆ ಗಣೇಶನ ಪ್ರತಿಮೆ 2ರಿಂದ 4 ಅಡಿಯೇ ಇರಬೇಕು ಎಂಬ ನಿರ್ಬಂಧದ ಹಿಂದೆ ಯಾವ ತರ್ಕ ಇದೆ, ಹಿಂದೂ ಸಂಸ್ಕೃತಿ ವಕ್ತಾರರು ಮಾಡುವ ಕೆಲಸ ಇದೇನಾ ಎಂದು ಲೇವಡಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments