ರಾಜಸ್ಥಾನದಿಂದ ನಗರಕ್ಕೆ ಬಂದ ಮಾಂಸದ ಬಗ್ಗೆ ಮತ್ತೇ ಸ್ಪಷ್ಟಣೆ ನೀಡಿದ ದಿನೇಶ್ ಗುಂಡೂರಾವ್

Sampriya
ಬುಧವಾರ, 31 ಜುಲೈ 2024 (15:28 IST)
Photo Courtesy X
ಬೆಂಗಳೂರು: ಈಚೆಗೆ ರಾಜಸ್ಥಾನದಿಂದ ರೈಲಿನಲ್ಲಿ ಬೆಂಗಳೂರಿಗೆ ಸರಬರಾಜಾಗಿದ್ದು ಕುರಿಯ ಮಾಂಸ ಎಂದು ಪರೀಕ್ಷಾ ವರದಿಯಲ್ಲಿ ದೃಢಪಟ್ಟಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಈ ಸಂಬಂಧ ಎಕ್ಸ್‌ನಲ್ಲಿ ವರದಿಯ ರಿಪೋರ್ಟ್ ಹಂಚಿಕೊಂಡು ಬರೆದುಕೊಂಡಿದ್ದಾರೆ.

ಜುಲೈ 26ರಂದು ನಾಯಿ ಮಾಂಸವನ್ನು ರೈಲಿನ ಮೂಲಕ ನಗರಕ್ಕೆ ತಂದು ಹೋಟೆಲ್‌ಗಳಿಗೆ ಪೂರೈಕೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಪುನೀತ್ ಕೆರೆಹಳ್ಳಿ ಅವರ ನೇತೃತ್ವದ ಗುಂಪೊಂದು ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಶುಕ್ರವಾರ ರಾತ್ರಿ ಪ್ರತಿಭಟನೆ ನಡೆಸಿತು. ಈ ಸಂಬಂಧ ಮಾಂಸದ ಮಾದರಿಯನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು.


ಈಚೆಗೆ ರಾಜಸ್ಥಾನದಿಂದ ಸರಬರಾಜಾಗುತ್ತಿದ್ದ ಮಾಂಸದ ಕುರಿತಾದ ಘಟನೆಗಳ ಹಿನ್ನೆಲೆಯಲ್ಲಿ ರೈಲುಗಳಲ್ಲಿ ಬಂದಿದ್ದ ಮಾಂಸದ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯಗಳಿಗೆ ಕಳುಹಿಸಲಾಗಿತ್ತು.

ಇದೀಗ ಪ್ರಯೋಗಾಲಯಗಳಿಂದ ಪರೀಕ್ಷಾ ವರದಿ ಬಂದಿದ್ದು ರಾಜಸ್ಥಾನದಿಂದ ಬಂದ ಮಾಂಸವು 'ಕುರಿ'ಯದ್ದೇ ಆಗಿದೆ ಎಂಬುದನ್ನು ಪ್ರಯೋಗಾಲಯವು ಖಚಿತಪಡಿಸಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಅನಗತ್ಯ ಗೊಂದಲ ಸೃಷ್ಟಿಸದಂತೆ ಮತ್ತು ಈ ಕುರಿತ ಗಾಳಿ ಸುದ್ದಿಗಳಿಗೆ ಕಿವಿಗೊಡದಂತೆ ನಾನು ಸಾರ್ವಜನಿಕರಲ್ಲಿ ವಿನಂತಿಸುತ್ತೇನೆ<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಧಾನಸಭೆ ಚುನಾವಣೆ, ಬಿಹಾರದಲ್ಲಿ ರಾಹುಲ್ ಗಾಂಧಿ ಮೊದಲ ರ್ಯಾಲಿ

ದ್ವೇಷ ಭಾಷಣ ಮಾಡುವವರ ಬಗ್ಗೆ ಮಂಗಳೂರಿನಲ್ಲಿ ಗುಡುಗಿದ ಸಿದ್ದರಾಮಯ್ಯ

ಮಹತ್ವದ ಪೋಸ್ಟ್ ಹಂಚಿಕೊಂಡ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌

ತನ್ನವರನ್ನು ಕಳೆದುಕೊಂಡ ಸಂತ್ರಸ್ತರ ಕುಟುಂಬದ ಜತೆ ವಿಜಯ್ ನಡೆ ಹೇಗಿತ್ತು ಗೊತ್ತಾ

ಸಿಎಂ ಬದಲಾವಣೆ ಚರ್ಚೆಯ ನಡುವೆ ಸ್ಫೋಟಕ ಹೇಳಿಕೆ ಕೊಟ್ಟ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments