Publish Date: Wed, 04 Jul 2018 (15:55 IST)
Updated Date: Wed, 04 Jul 2018 (15:57 IST)
ಹಲವು ದಿನಗಳಿಂದ ಕುತೂಹಲ ಕೆರಳಿಸಿದ್ದ ಕೆಪಿಸಿಸಿ ಅಧ್ಯಕ್ಷ ಪಟ್ಟ ಇದೀಗ ದಿನೇಶ್ ಗುಂಡೂರಾವ್ ಪಾಲಾಗಿದೆ. ಕಾರ್ಯಾಧ್ಯಕ್ಷರಾಗಿ ಶಾಸಕ ಈಶ್ವರ್ ಖಂಡ್ರೆಯವರನ್ನು ನೇಮಕ ಮಾಡಿ ಪಕ್ಷದ ಹೈಕಮಾಂಡ್ ಆದೇಶ ಹೊರಡಿಸಿದೆ.
ಮಾಜಿ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಇದೀಗ ಉಪಮುಖ್ಯಮಂತ್ರಿ ಸ್ಥಾನ ಅಲಂಕರಿಸಿದ್ದರಿಂದ, ಅವರಿಂದ ತೆರವಾದ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ನೇಮಕ ಮಾಡಲಾಗಿದೆ.
ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಉತ್ತರಕರ್ನಾಟಕ ಭಾಗದಲ್ಲಿ ಹಿನ್ನೆಡೆಯಾಗಿದ್ದರಿಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಎಸ್.ಆರ್.ಪಾಟೀಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ತೆರವಾದ ಕಾರ್ಯಾಧ್ಯಕ್ಷ ಸ್ಥಾನಕ್ಕೆ ಈಶ್ವರ್ ಖಂಡ್ರೆಯವರನ್ನು ನೇಮಕ ಮಾಡಲಾಗಿದೆ.