Publish Date: Mon, 20 Jun 2016 (18:24 IST)
Updated Date: Mon, 20 Jun 2016 (18:26 IST)
ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಮಾಜಿ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಕೆಪಿಸಿಸಿಯ ಕಾರ್ಯಧ್ಯಕ್ಷರಾಗಿ ನೇಮಕ ಮಾಡಿ ಎಐಸಿಸಿ ಆದೇಶ ಹೊರಡಿಸಿದೆ.
ರಾಜ್ಯ ಸಚಿವ ಸಂಪುಟದಿಂದ ದಿನೇಶ್ ಗುಂಡೂರಾವ್ ಅವರನ್ನು ಕೈಬಿಟ್ಟಿರುವ ಹಿನ್ನೆಲೆಯಲ್ಲಿ ಅವರ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಿವಾಸದ ಮುಂದೆ ಪ್ರತಿಭಟನೆ ನಡೆಸಿದ್ದರು. ಇದೀಗ, ಅವರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಹುದ್ದೆ ನೀಡುವ ಮೂಲಕ ಪಕ್ಷ ಹೊಸ ಜವಾಬ್ದಾರಿಯನ್ನು ನೀಡಿದ್ದಾರೆ.
ಈ ಹಿಂದೆ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದರು. ಅವರ ನಂತರ ಖಾಲಿ ಉಳಿದುಕೊಂಡಿರುವ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ಅವರನ್ನು ನೇಮಕ ಮಾಡಲಾಗಿದೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ