Select Your Language

Notifications

webdunia
webdunia
webdunia
webdunia

ಜೆಡಿಎಸ್ ಜತೆ ಮೈತ್ರಿ ಮಾಡಿಕೊಳ್ಳಲು ಮನಸ್ಸಿಲ್ಲ ಎಂದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್

ಜೆಡಿಎಸ್ ಜತೆ ಮೈತ್ರಿ ಮಾಡಿಕೊಳ್ಳಲು ಮನಸ್ಸಿಲ್ಲ ಎಂದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್
ಬೆಂಗಳೂರು , ಬುಧವಾರ, 5 ಸೆಪ್ಟಂಬರ್ 2018 (09:58 IST)
ಬೆಂಗಳೂರು: ರಾಜ್ಯ ರಾಜಕಾರಣ, ಸ್ಥಳೀಯ ಸಂಸ್ಥೆಯಲ್ಲಿ ಮೈತ್ರಿ ಬಳಿಕ ಲೋಕಸಭೆ ಚುನಾವಣೆಗೂ ಮೈತ್ರಿ ಮಾಡಿಕೊಳ್ಳಲು ಕಾಂಗ್ರೆಸ್-ಜೆಡಿಎಸ್ ಮುಂದಾಗಿವೆ. ಆದರೆ ಈ ಮೈತ್ರಿ ಮಾಡಿಕೊಳ್ಳಲು ತಮಗೆ ಮನಸ್ಸಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಜೆಡಿಎಸ್ ಜತೆ ಸೇರಿ ಲೋಕಸಭೆ ಚುನಾವಣೆ ಎದುರಿಸಲು ಮನಸ್ಸಿಲ್ಲ. ಹಾಗಿದ್ದರೂ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಈ ಮೈತ್ರಿ ಅನಿವಾರ್ಯ. ಅದಕ್ಕಾಗಿ ಮೈತ್ರಿ ಮಾಡಿಕೊಳ್ಳುತ್ತಿದ್ದೇವೆ ಎಂದು ದಿನೇಶ್ ಗುಂಡೂರಾವ್ ಹೇಳಿಕೊಂಡಿದ್ದಾರೆ.

ಜೆಡಿಎಸ್ ಜತೆ ಸೇರಿದರೆ ರಾಜ್ಯದಲ್ಲಿ ಎರಡೂ ಪಕ್ಷಗಳು ಸೇರಿಕೊಂಡು 20 ರಿಂದ 25 ಸ್ಥಾನ ಗೆಲ್ಲಬಹುದು. ರಾಷ್ಟ್ರ ರಾಜಕಾರಣದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದ್ದು, ಸುಳ್ಳು ಹೇಳಿಕೊಂಡು ರಾಜಕಾರಣ ಮಾಡುತ್ತಿರುವ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಬೇಕಾದರೆ ಮೈತ್ರಿ ಅನಿವಾರ್ಯ ಎಂದು ಗುಂಡೂರಾವ್ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

Share this Story:

Follow Webdunia kannada

ಮುಂದಿನ ಸುದ್ದಿ

ರಾಖಿ ಕಟ್ಟಲು ಬಂದವಳನ್ನು ಕೂಡಿ ಹಾಕಿ ಅತ್ಯಾಚಾರ ಮಾಡಿದ ಕಾಮುಕ