Publish Date: Mon, 27 Aug 2018 (10:33 IST)
Updated Date: Mon, 27 Aug 2018 (10:34 IST)
ಬೆಂಗಳೂರು: ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸುಳ್ಳಿನ ಕಂತೆಯನ್ನೇ ಬಿಡುತ್ತಿದೆ. ಈ ಸುಳ್ಳಿನ ಸರ್ಕಾರವನ್ನು ಕಿತ್ತೊಗೆಯಬೇಕಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಲೋಕಪಾಲ್ ಬಿಲ್ ಪಾಸ್ ಮಾಡದ ಮೋದಿ ಸರ್ಕಾರಕ್ಕೆ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ಹಕ್ಕಿಲ್ಲ. ರಫೇಲ್ ಯುದ್ಧ ವಿಮಾನ ಖರೀದಿ ವಿಚಾರದಲ್ಲಿ 40, 000 ಕೋಟಿ ರೂ. ಡೀಲಿಂಗ್ ನಡೆದಿದೆ. ಇದರ ಬಗ್ಗೆ ಯಾರೊಬ್ಬರೂ ಸ್ಪಷ್ಟನೆ ನೀಡುತ್ತಿಲ್ಲ. ಇಂತಹ ಸುಳ್ಳು ಸರ್ಕಾರವನ್ನು ಕಿತ್ತೊಗೆಯಬೇಕಿದೆ ಎಂದು ಅವರು ಟೀಕಿಸಿದ್ದಾರೆ.
ಅಷ್ಟೇ ಅಲ್ಲದೆ, ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ನಮ್ಮ ಹಿಂದಿನ ಕಾಂಗ್ರೆಸ್ ಸರ್ಕಾರದ ಸಾಧನೆಗಳೇ ವರವಾಗಲಿದೆ. ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ನಾವೇ ಗೆಲ್ಲಲಿದ್ದೇವೆ ಎಂದೂ ಅವರು ಭರವಸೆ ವ್ಯಕ್ತಪಡಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.