ಸಿಎಂ ಎಚ್ ಡಿಕೆ, ಬಿಜೆಪಿಗೆ ಟ್ವಿಟರ್ ನಲ್ಲೇ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಡಿಮ್ಯಾಂಡ್

ಗುರುವಾರ, 16 ಆಗಸ್ಟ್ 2018 (09:45 IST)
ಬೆಂಗಳೂರು: ಅತ್ತ ಕೇರಳದಿಂದ ಕರ್ನಾಟಕಕ್ಕೆ ಕಾಲಿಟ್ಟು ಪ್ರವಾಹ ಸೃಷ್ಟಿಸುತ್ತಿರುವ ವರುಣನಿಂದಾಗಿ ರಾಜ್ಯಕ್ಕೆ ಪರಿಹಾರ ನೀಡುವಂತೆ ಕೇಂದ್ರಕ್ಕೆ ಕೆಪಿಸಿಸಿ ಅಧ‍್ಯಕ್ಷ ದಿನೇಶ್ ಗುಂಡೂರಾವ್ ಟ್ವೀಟ್ ಮಾಡಿದ್ದಾರೆ.

ಮಲೆನಾಡು, ಕೊಡಗು ಮತ್ತು ಕರಾವಳಿಯಲ್ಲಿ ಭಾರೀ ಮಳೆಯಿಂದ ಸಾಕಷ್ಟು ನಷ್ಟವಾಗಿದೆ. ಕಾಂಗ್ರೆಸ್ ರಾಜ್ಯ ಸರ್ಕಾರವನ್ನು ಪರಿಹಾರ ನಿಧಿ ಬಿಡುಗಡೆ ಮಾಡಲು ಒತ್ತಡ ಹೇರಲಿದೆ. ಅದೇ ರೀತಿ ಬಿಜೆಪಿ ನಾಯಕರು ಕೇಂದ್ರ ಸರ್ಕಾರದ ವತಿಯಿಂದ ಹೆಚ್ಚಿನ ಹಣ ಬಿಡುಗಡೆ ಮಾಡಲು ಪ್ರಧಾನಿ ಮೋದಿ ಮೇಲೆ ಒತ್ತಡ ಹೇರಲಿ ಎಂದು ದಿನೇಶ್ ಗುಂಡೂರಾವ್ ಟ್ವೀಟ್ ಮಾಡಿದ್ದಾರೆ.

ಭಾರೀ ಮಳೆಯಿಂದಾಗಿ ಕರಾವಳಿ, ಮಡಿಕೇರಿ, ಕಾವೇರಿ ನದಿ ಪಾತ್ರದಲ್ಲಿ ಪ್ರವಾಹದ ವಾತಾವರಣವಿದೆ. ಈ ಭಾಗದ ಜನ ಮಳೆಯಿಂದಾಗಿ ಸಾಕಷ್ಟು ಕಷ್ಟ ನಷ್ಟ ಅನುಭವಿಸುತ್ತಿದ್ದಾರೆ. ಇದೇ ಕಾರಣಕ್ಕೆ ಕೆಪಿಸಿಸಿ ಅಧ್ಯಕ್ಷರು ಟ್ವೀಟ್ ಮೂಲಕವೇ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಚಿಕಿತ್ಸೆಗೆ ಸ್ಪಂದಿಸದ ಮಾಜಿ ಪ್ರಧಾನಿ ವಾಜಪೇಯಿ, ಕೆಲವೇ ಕ್ಷಣಗಳಲ್ಲಿ ವೈದ್ಯರಿಂದ ಹೆಲ್ತ್ ಬುಲೆಟಿನ್ ಬಿಡುಗಡೆ