Select Your Language

Notifications

webdunia
webdunia
webdunia
webdunia

ವಿಶ್ವವಿದ್ಯಾಲಯದಲ್ಲಿ ಶಿಕ್ಷಕ ಹುದ್ದೆಗಳಿಗೆ ನೇರ ನೇಮಕಾತಿ

ವಿಶ್ವವಿದ್ಯಾಲಯದಲ್ಲಿ ಶಿಕ್ಷಕ ಹುದ್ದೆಗಳಿಗೆ ನೇರ ನೇಮಕಾತಿ
ಧಾರವಾಡ , ಸೋಮವಾರ, 24 ಫೆಬ್ರವರಿ 2020 (16:22 IST)
ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ಖಾಲಿ ಇರೋ ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ನೇರ ಸಂದರ್ಶನ ನಡೆಸಲಾಗುತ್ತಿದೆ.

 2 ಅರೆಕಾಲಿಕ ಶಿಕ್ಷಕ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸುತ್ತಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಧಿಸೂಚನೆ ನೋಡಬಹುದಾಗಿದೆ. ಅಗತ್ಯ ದಾಖಲೆಗಳೊಂದಿಗೆ ಫೆ. 28 ರಂದು ನಡೆಯಲಿರುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಶೈಕ್ಷಣಿಕ ವಿದ್ಯಾರ್ಹತೆ: ಪಿ ಹೆಚ್‌ ಡಿ ವಿದ್ಯಾರ್ಹತೆ ಹೊಂದಿರಬೇಕು.
ವಯೋಮಿತಿ: ಧಾರವಾಡ ಕೃಷಿ ವಿಶ್ವವಿದ್ಯಾಲಯ ನೇಮಕಾತಿ ನಿಯಮಾನುಸಾರ ವಯೋಮಿತಿ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವೇತನದ ವಿವರ: ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 40,000 ರೂ. ವೇತನವಿದೆ.  
ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮತ್ತು ಸಂದರ್ಶನ. 

ಸಂದರ್ಶನದ ವಿವರ: ಅರ್ಹ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆ ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಸಂದರ್ಶನ ದಿನಾಂಕ ಮತ್ತು ಸಮಯ:ಫೆ. 28 ರಂದು ಬೆಳಿಗ್ಗೆ 11ಕ್ಕೆ.

Share this Story:

Follow Webdunia kannada

ಮುಂದಿನ ಸುದ್ದಿ

ಡೊನಾಲ್ಡ್ ಟ್ರಂಪ್ ಗೆ ಧನ್ಯವಾದ ಸಲ್ಲಿಸಿದ ಮೋದಿ