ದೋಸ್ತಿ ಸರ್ಕಾರದಲ್ಲಿ ಮತ್ತೆ ಅಸಮಾಧಾನ; ಜೆಡಿಎಸ್ ನ ಸೋದರಜೋಡಿಯ ಮೇಲೆ ದಿನೇಶ್‌ ಗುಂಡೂರಾವ್‌ ಗರಂ

Webdunia
ಶನಿವಾರ, 5 ಜನವರಿ 2019 (10:47 IST)
ಬೆಂಗಳೂರು : ದೋಸ್ತಿ ಸರ್ಕಾರದಲ್ಲಿ ಇದೀಗ ಮತ್ತೆ ಅಸಮಾಧಾನ ಭುಗಿಲೆದಿದ್ದು, ಜೆಡಿಎಸ್ ನ ಸೋದರಜೋಡಿಯ ಮೇಲೆ ಇದೀಗ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ.


'ಮುಂದಿನ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್‌ನ್ನು 12 ಸ್ಥಾನಗಳಲ್ಲಿ ಗೆಲ್ಲಿಸಿಕೊಡಿ' ಎಂದು ತಮ್ಮ ಕಾರ್ಯಕರ್ತರಿಗೆ ಕುಮಾರಸ್ವಾಮಿ ಕರೆ ನೀಡಿದ ಬಗ್ಗೆ ಅಸಮಾಧಾನ ಹೊರಹಾಕಿರುವ ದಿನೇಶ್‌ ಗುಂಡೂರಾವ್‌, ' ಜೆಡಿಎಸ್‌ಗೆ 12 ಸ್ಥಾನ ಬಿಟ್ಟು​ಕೊ​ಡುವ ಕುರಿತು ಎಲ್ಲೂ ಚರ್ಚೆಯಾಗಿಲ್ಲ. ಎಚ್‌.ಡಿ. ಕುಮಾರಸ್ವಾಮಿ ಅವರು ಜೆಡಿಎಸ್‌ ವೇದಿಕೆಯಲ್ಲಿ ಮಾತ್ರ ಚರ್ಚೆ ಮಾಡಿದ್ದಾರೆ. ಲೋಕಸಭೆ ಚುನಾವಣೆ ಸ್ಥಾನಗಳ ಹಂಚಿಕೆಗಳ ಬಗ್ಗೆ ಇನ್ನೂ ಎರಡೂ ಪಕ್ಷಗಳ ನಡುವೆ ಚರ್ಚೆಯಾಗಿಲ್ಲ. ಚರ್ಚೆಯಾಗದೆ ಅಂತಹ ವಿಚಾರಗಳ ಬಗ್ಗೆ ಬಹಿರಂಗವಾಗಿ ಹೇಳುವುದು ಬೇಡ. ಇಷ್ಟಕ್ಕೂ ಕ್ಷೇತ್ರಗಳ ಸಂಖ್ಯೆ ಮುಖ್ಯವಲ್ಲ. ಬದಲಿಗೆ ನಮಗೆ ಗೆಲ್ಲುವುದು ಮಾತ್ರ ಮುಖ್ಯ' ಎಂದು ಹೇಳಿದ್ದಾರೆ.


ಹಾಗೇ ಇನ್ನು 'ಕಾಂಗ್ರೆಸ್‌ ಪಕ್ಷವು ಸಂಚು ನಡೆಸಿ ದಲಿತ ನಾಯಕರಾದ ಡಾ.ಜಿ. ಪರಮೇಶ್ವರ್‌ ಅವರಿಂದ ಗೃಹ ಖಾತೆ ಕಸಿದುಕೊಂಡಿದೆ. ಪರಿಶಿಷ್ಟಸಮುದಾಯದ ನಾಯಕನ ಕಾಂಗ್ರೆಸ್‌ನವರೇ ಸಹಿಸದಿದ್ದರೆ ಹೇಗೆ' ಎಂಬ ಸಚಿವ ಎಚ್‌.ಡಿ. ರೇವಣ್ಣ ಅವರ ಹೇಳಿಕೆಗೂ ಆಕ್ರೋಶ ವ್ಯಕ್ತಪಡಿಸಿದ ದಿನೇಶ್‌, 'ಸಮ್ಮಿಶ್ರ ಸರ್ಕಾರದ ದೋಸ್ತಿ ಪಕ್ಷವಾಗಿರುವ ಕಾಂಗ್ರೆಸ್‌ ಬಗ್ಗೆ ಬಹಿರಂಗವಾಗಿ ಹೇಳಿಕೆ ನೀಡದಂತೆ ರೇವಣ್ಣ ಅವರಿಗೆ ಸಲಹೆ ನೀಡುತ್ತೇನೆ. ಬಹಿರಂಗವಾಗಿ ಒಂದು ಪಕ್ಷದ ಬಗ್ಗೆ ಮಾತನಾಡಬಾರದು' ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಸಹಾಯ ಕೇಳಲು ಬಂದ ಯುವತಿಗೆ ಲೈಂಗಿಕ ದೌರ್ಜನ್ಯ, ಕೋರ್ಟ್‌ಗೆ ಹಾಜರಾಗಲು ಬಿಎಸ್‌ವೈಗೆ ಸಮನ್ಸ್‌

ಸೂಸೈಡ್ ಬಾಂಬರ್ ದಾರಿ ತಪ್ಪಿದ ಮಗ: ಕಾಂಗ್ರೆಸ್ ಸಂಸದನ ಹೇಳಿಕೆ ಕೇಳಿದ್ರೆ ಶಾಕ್

ಮುಂದಿನ ಸುದ್ದಿ
Show comments