Select Your Language

Notifications

webdunia
webdunia
webdunia
webdunia

ಹೈ-ಕ ದಿನಾಚರಣೆ: ರಾಷ್ಟ್ರಧ್ವಜಕ್ಕೆ ಅಗೌರವ ತೋರಿದಲ್ಲಿ ಶಿಸ್ತು ಕ್ರಮ

ಹೈ-ಕ ದಿನಾಚರಣೆ
ಕಲಬುರಗಿ , ಮಂಗಳವಾರ, 11 ಸೆಪ್ಟಂಬರ್ 2018 (17:42 IST)
ಹೈದ್ರಾಬಾದ್ ಕರ್ನಾಟಕ ಪ್ರದೇಶದಲ್ಲಿ ಸೆ. 17ರಂದು ಹೈದ್ರಾಬಾದ್ ಕರ್ನಾಟಕ ವಿಮೋಚನಾ ದಿನಾಚರಣೆ ಅದ್ಧೂರಿಯಿಂದ ಆಚರಿಸಲು ಸಿದ್ಧತೆ ನಡೆದಿದೆ.

ಹೈದ್ರಾಬಾದ್ ಕರ್ನಾಟಕ ಪ್ರದೇಶದಲ್ಲಿ ಹೈ-ಕ ವಿಮೋಚನಾ ದಿನಾಚರಣೆಗೆ ಸಿದ್ಧತೆ ನಡೆದಿದೆ. ವಿಭಾಗೀಯ ಕೇಂದ್ರವಾಗಿರುವ ಕಲಬುರಗಿ ಜಿಲ್ಲೆಯಲ್ಲಿ ಇದೇ ಸೆಪ್ಟೆಂಬರ್ 17ರಂದು ಹೈದ್ರಾಬಾದ ಕರ್ನಾಟಕ ವಿಮೋಚನಾ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ.

ಈ ಸಂದರ್ಭದಲ್ಲಿ ಎಲ್ಲ ಇಲಾಖೆಗಳ ಅಧಿಕಾರಿಗಳು ಅಗತ್ಯವಿದ್ದಲ್ಲಿ ನೂತನ ರಾಷ್ಟ್ರಧ್ವಜವನ್ನು ಖರೀದಿಸಬೇಕು. ಯಾವುದೇ ಕಾರಣಕ್ಕೂ ರಾಷ್ಟ್ರ ಧ್ವಜಕ್ಕೆ ಅಗೌರವವಾದು ಕಂಡು ಬಂದಲ್ಲಿ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳ ವಿರುದ್ಧ ಕಾನೂನಿನನ್ವಯ ಶಿಸ್ತು  ಕ್ರಮ ಜರುಗಿಸಲಾಗುವುದು ಎಂದು ಕಲಬುರಗಿ ಹೆಚ್ಚುವರಿ ಜಿಲ್ಲಾಧಿಕಾರಿ ಭೀಮಾಶಂಕರ ತೆಗ್ಗೆಳ್ಳಿ ತಿಳಿಸಿದ್ದಾರೆ. ಶಾಂತಿಯುತವಾಗಿ ದಿನಾಚರಣೆ ಮಾಡಬೇಕೆಂದು ಅಧಿಕಾರಿಗಳು ಹೇಳಿದ್ದಾರೆ.




Share this Story:

Follow Webdunia kannada

ಮುಂದಿನ ಸುದ್ದಿ

ಶಾಸಕ ಎಂ.ಬಿ.ಪಾಟೀಲ್ ಸಹೋದರ ಈಗ ಎಂಎಲ್ ಸಿ