Webdunia - Bharat's app for daily news and videos

Install App

ಮೆಟ್ರೋ ಟಿಕೆಟ್ ದರದಲ್ಲಿ ರಿಯಾಯಿತಿ

Webdunia
ಶುಕ್ರವಾರ, 12 ಆಗಸ್ಟ್ 2022 (18:01 IST)
ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವ ಹಿನ್ನೆಲೆ ಆಯೋಜನೆಗೊಂಡಿರುವ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನಕ್ಕೆ ಭೇಟಿ ಕೊಡುವ ಮೆಟ್ರೋ ಪ್ರಯಾಣಿಕರಿಗೆ ಮೂರು ದಿನ ಟಿಕೆಟ್ ದರದಲ್ಲಿ ರಿಯಾಯಿತಿ ನೀಡಲಾಗಿದ್ದು, ದರ 30 ರೂ.ಗೆ ನಿಗದಿ ಮಾಡಲಾಗಿದೆ. ಆಗಸ್ಟ್​​ 13 ರಿಂದ ಆ.15ರವರೆಗೆ ಮೂರು ದಿನ ರಿಟರ್ನ್ ಜರ್ನಿಗಾಗಿ ಪೇಪರ್ ಟಿಕೆಟ್ ಕೊಡಲಾಗುವುದು. ಆ ದಿನ ಬೆಳಗ್ಗೆ 10 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಲಾಲ್‌ಬಾಗ್ ಮೆಟ್ರೋ ನಿಲ್ದಾಣದಿಂದ ಯಾವುದೇ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣಿಸಲು ಟಿಕೆಟ್ ದರವನ್ನು ರೂ.30ಗೆ ನಿಗದಿಪಡಿಸಲಾಗಿದೆ. ಜೊತೆಗೆ ಪೇಪರ್ ಟಿಕೆಟ್ ಆ ದಿನದ ಒಂದು ಪ್ರಯಾಣಕ್ಕೆ, ಲಾಲ್‌ಬಾಗ್​ನಿಂದ ಯಾವುದೇ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣಿಸಲು ಮಾನ್ಯವಾಗಿರುತ್ತದೆ. ಎಲ್ಲ ಮೆಟ್ರೋ ನಿಲ್ದಾಣಗಳಲ್ಲಿ ಮೂರು ದಿನ ಬೆಳಗ್ಗೆ 8 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಪೇಪರ್ ಟಿಕೆಟ್‌ಗಳನ್ನು ಖರೀದಿಸಬಹುದಾಗಿದೆ. ಲಾಲ್‌ಬಾಗ್ ಮೆಟ್ರೋ ನಿಲ್ದಾಣದಲ್ಲಿ ಈ ಸದರಿ ಪೇಪರ್ ಟಿಕೆಟ್ ರಾತ್ರಿ 8 ಗಂಟೆಯವರೆಗೆ ಲಭ್ಯವಿರುತ್ತದೆ. ಎಲ್ಲ ಮೆಟ್ರೋ ಪ್ರಯಾಣಿಕರು ತ್ವರಿತ ಪ್ರಯಾಣಕ್ಕಾಗಿ ರಿಟರ್ನ್ ಜರ್ನಿ ಪೇಪರ್ ಟಿಕೆಟ್​​​ಗಳನ್ನು ಬಳಸಬೇಕು ಮತ್ತು ಲಾಲ್‌ಬಾಗ್ ನಿಲ್ದಾಣದಲ್ಲಿ ಪ್ರವೇಶಿಸಲು ಮತ್ತು ಯಾವುದೇ ನಿಲ್ದಾಣದಿಂದ ನಿರ್ಗಮಿಸಲು ಪೇಪರ್‌ ಟಿಕೆಟ್‌ನ್ನು ಹಾಜರಿಪಡಿಸಬೇಕು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments