Select Your Language

Notifications

webdunia
webdunia
webdunia
webdunia

ಸಿಎಂ ಜೊತೆ ಚರ್ಚಿಸಿ ಹಾಲಿನ ದರ ಫೈನಲ್!

Discuss milk price final with CM
bangalore , ಶುಕ್ರವಾರ, 14 ಜುಲೈ 2023 (16:00 IST)
ಹಾಲಿನ ದರ ಹೆಚ್ಚಳಕ್ಕೆ ಕೆಎಂಎಫ್ ಪ್ರಸ್ತಾವನೆ ಸಲ್ಲಿಸಿದೆ. ಹಾಲಿನ ದರ ಲೀಟರ್‌ಗೆ 5 ರೂಪಾಯಿ ಹೆಚ್ಚಿಸು ಸಂಬಂಧ ಇಂದು ಹಾಲು ಒಕ್ಕೂಟಗಳು ಮತ್ತು ಕೆಎಂಎಫ್‌ ಪದಾಧಿಕಾರಿಗಳ ಜೊತೆಗೆ ಸಿಎಂ ಸಿದ್ದರಾಮಯ್ಯ ಸಂಜೆ 5.30ಕ್ಕೆ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಲಿದ್ದಾರೆ.. ಜುಲೈ 11ರಂದೇ ಕೆಎಂಎಫ್‌ ಪದಾಧಿಕಾರಿಗಳು ಹಾಗೂ ಹಾಲು ಒಕ್ಕೂಟಗಳ ಅಧ್ಯಕ್ಷರ ನಿಯೋಗ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ ಹಾಲಿನ ದರ ಏರಿಕೆ ಕುರಿತು ಚರ್ಚಿಸಬೇಕಿತ್ತು. ಆದರೆ, ವಿವಿಧ ಕಾರಣಗಳಿಂದ ಸಭೆಯನ್ನು ಮುಂದೂಡಲಾಗಿತ್ತು. ಇದೀಗ ಮುಖ್ಯಮಂತ್ರಿಯವರು ಈ ಕುರಿತು ಚರ್ಚಿಸಲು ಸಮಯ ಕೊಟ್ಟಿರುವ ಹಿನ್ನೆಲೆಯಲ್ಲಿ ಇಂದು ಸಂಜೆ ಸಭೆ ನಡೆಯಲಿದೆ. ಜೊತೆಗೆ ಹಾಲಿನ ದರ ಹೆಚ್ಚಳದ ಬಗ್ಗೆಯೂ ಅಂತಿಮ ನಿರ್ಧಾರ ಹೊರಬೀಳುವ ಸಾಧ್ಯತೆ ಇದೆ ಎನ್ನಲಾಗಿದೆ

Share this Story:

Follow Webdunia kannada

ಮುಂದಿನ ಸುದ್ದಿ

‘ಗೃಹಲಕ್ಷ್ಮಿಯ ಹಣ ರೆಡಿ ಇದೆ