Publish Date: Tue, 05 Feb 2019 (16:10 IST)
Updated Date: Tue, 05 Feb 2019 (16:23 IST)
ಸುಮಲತಾ ಅಂಬರೀಶ್ ಚುನಾವಣೆಗೆ ನಿಲ್ಲುತ್ತಾರೆ ಎನ್ನುವ ವಿಚಾರ ಕೇಳಿ ಬರುತ್ತಿರುವ ಬೆನ್ನಲ್ಲೆ ವಾಟ್ಸ್ ಅಪ್ ನಲ್ಲಿ ಲಕ್ಷ್ಮಿ ಅಶ್ವಿನ್ ಗೌಡ ಹೆಸರು ಹರಿದಾಡಲಾರಂಭಿಸಿದೆ.
ಮಂಡ್ಯದ ನಿಜವಾದ ಮನೆ ಮಗಳು ಯಾರು...? ಲಕ್ಷ್ಮಿ ಅಶ್ವಿನ್ ಗೌಡ ಅಥವಾ ಸುಮಲತಾ ಎಂಬ ಚರ್ಚೆ ಶುರುವಾಗಿದೆ.
ಕಾಂಗ್ರೆಸ್ ನಿಂದ ಸುಮಲತಾ ರನ್ನ ಕಣಕ್ಕಿಳಿಸಲು ಪ್ರಯತ್ನಿಸುತ್ತಿರುವ ಬೆನ್ನಲ್ಲೆ, ಜೆಡಿಎಸ್ ನಿಂದ ಲಕ್ಷ್ಮಿ ಅಶ್ವಿನ್ ಗೌಡ ಹೆಸರು ಚಾಲ್ತಿಗೆ ತಂದು ಚರ್ಚೆ ಶುರುಮಾಡಲಾಗಿದೆ.
ನವೆಬರ್ ನಲ್ಲಿ ನಡೆದ ಲೋಕಸಭೆ ಉಪ ಚುನಾವಣೆಯಲ್ಲಿ ಲಕ್ಷ್ಮಿ ಅಶ್ವಿನ್ ಗೌಡ ಆಕಾಂಕ್ಷಿಯಾಗಿದ್ದರು. ಆದರೆ ವರಿಷ್ಠರು ಎಲ್. ಆರ್. ಶಿವರಾಮೇಗೌಡರಿಗೆ ಟಿಕೆಟ್ ನೀಡಿದ್ದರು. ಈಗ ಸುಮಲತಾ ಅಂಬರೀಶ್ ಸ್ಪರ್ಧೆ ಮಾಡೋದಾದರೆ ಅವರ ವಿರುದ್ದ ಜೆಡಿಎಸ್ ನಿಂದ ಲಕ್ಷ್ಮಿ ಅಶ್ವಿನ್ ಗೌಡರನ್ನ ನಿಲ್ಲಿಸ್ತಾರೆ ಎನ್ನಲಾಗುತ್ತಿದೆ. ಆ ಮೂಲಕ ಮಂಡ್ಯದ ನಿಜವಾದ ಮಗಳು ಎಂದು ಅಂಬಿ ಅಭಿಮಾನಿಗಳಿಗೆ ಸೆಡ್ಡು ಹೊಡೆಯುತ್ತಾರೆ ಎಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ.