Select Your Language

Notifications

webdunia
webdunia
webdunia
webdunia

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ - ಸಿಎಂ

Discussion on Cabinet expansion
bangalore , ಗುರುವಾರ, 7 ಏಪ್ರಿಲ್ 2022 (17:44 IST)
ಏಪ್ರಿಲ್ 16 ಮತ್ತು 17 ರಂದು ನಡೆಯಲಿರುವ ಬಿಜೆಪಿ ರಾಜ್ಯ ಕಾರ್ಯಕಾರಿ ಸಮಿತಿ ಸಭೆ ಬಗ್ಗೆ ವರಿಷ್ಠರೊಂದಿಗೆ ಚರ್ಚೆ ನಡೆಸಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಬೊಮ್ಮಾಯಿ, ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸ್ಥೂಲವಾಗಿ ಚರ್ಚೆಯಾಗಿದೆ. ವರಿಷ್ಠರು ಎಲ್ಲ ಮಾಹಿತಿಯನ್ನು ಪಡೆದುಕೊಂಡಿದ್ದಾರೆ. ಕಾರ್ಯಕಾರಿಣಿ ಸಭೆಗೆ ಬಂದ ಸಂದರ್ಭದಲ್ಲಿ ಮಿಕ್ಕ ವಿಚಾರಗಳನ್ನು ಮಾತನಾಡುವುದಾಗಿ ತಿಳಿಸಿದ್ದಾರೆ. ಇಲ್ಲಿಯ ವರಿಷ್ಠರು, ನಾಯಕರು, ಸಂಘಟನಾ ಕಾರ್ಯದರ್ಶಿಗಳೊಂದಿಗೆ ಚರ್ಚೆ ಮಾಡಿ ತೀರ್ಮಾನ ಮಾಡೋಣ ಎಂದು ತಿಳಿಸಿದ್ದಾರೆ. ಸಚಿವ ಸಂಪುಟ ಪುನಾರಚನೆ ಬಗ್ಗೆ ನಡ್ಡಾ ಬಳಿ ಚರ್ಚೆ ನಡೆಸಿರುವೆ. ಬಿಜೆಪಿ ವರಿಷ್ಠರು ಕೂಡ ಎಲ್ಲ ಮಾಹಿತಿಯನ್ನು ಪಡೆದಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ಸಾಧ್ಯವಾಗಲಿಲ್ಲ. ಅಮಿತ್ ಶಾ, ಬಿಎಲ್ ಸಂತೋಷ್ ಜೊತೆ ಚರ್ಚೆ ಮಾಡಬೇಕಿದೆ. ದೆಹಲಿ ಭೇಟಿ ಫಲಪ್ರದವಾಗಿದೆ ಎಂದು ಹೇಳಿದರು.

Share this Story:

Follow Webdunia kannada

ಮುಂದಿನ ಸುದ್ದಿ

12 ಸಾವಿರ ರೂಪಾಯಿ ಕಳೆದುಕೊಂಡ ಮಗ ಬೆಂಕಿ ಹಚ್ಚಿದ ಅಪ್ಪ ನೀಚ ಕೃತ್ಯ ಸಿಸಿಟಿವಿ ಯಲ್ಲಿ ಸೆರೆ