Select Your Language

Notifications

webdunia
webdunia
webdunia
webdunia

ಭಗ್ನಪ್ರೇಮಿಯಿಂದ ಕಾಲೇಜು ವಿದ್ಯಾರ್ಥಿನಿಗೆ ಚಾಕುವಿನಿಂದ ಇರಿತ

ಭಗ್ನಪ್ರೇಮಿಯಿಂದ ಕಾಲೇಜು ವಿದ್ಯಾರ್ಥಿನಿಗೆ ಚಾಕುವಿನಿಂದ ಇರಿತ
ಬೆಂಗಳೂರು , ಗುರುವಾರ, 6 ಜುಲೈ 2017 (13:06 IST)
ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿಗೆ ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ.
ಇಂದು ಬೆಳಿಗ್ಗೆ ವಿದ್ಯಾರ್ಥಿನಿ ಕಾಲೇಜಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ದ್ವಿಚಕ್ರವಾಹನದಲ್ಲಿ ಬಂದ ಇಬ್ಬರು ಆರೋಪಿಗಳಲ್ಲಿ ಹಿಂಬದಿ ಕುಳಿತಿದ್ದ ಆರೋಪಿ ಯುವತಿಗೆ ಮೂರು ನಾಲ್ಕು ಬಾರಿ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ.
 
ಕಳೆದ ಕೆಲ ತಿಂಗಳುಗಳಿಂದ ತನ್ನನ್ನು ಪ್ರೀತಿಸುವಂತೆ ಆರೋಪಿ, ಯುವತಿಯನ್ನು ನಿರಂತರವಾಗಿ ಒತ್ತಾಯಿಸುತ್ತಿದ್ದ ಎನ್ನಲಾಗಿದೆ. ಆದರೆ ಯುವತಿ ತಾನು ಯಾರನ್ನೂ ಪ್ರೀತಿಸುವುದಿಲ್ಲ ಎಂದು ಆತನ ಪ್ರೀತಿಯನ್ನು ತಿರಸ್ಕರಿಸಿದ್ದಳು.
 
ಕೆಲ ದಿನಗಳ ಹಿಂದೆ ಆರೋಪಿ, ಯುವತಿಯ ತಾಯಿಗೆ ಕರೆ ಮಾಡಿ ತಮ್ಮ ಮಗಳನ್ನು ತನಗೆ ವಿವಾಹ ಮಾಡಿಕೊಡುವಂತೆ ಒತ್ತಡ ಹೇರಿದ್ದನು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ಭಗ್ನಪ್ರೇಮಿಯ ಒತ್ತಡಕ್ಕೆ ಯುವತಿಯ ಮಣಿಯದಿರುವ ಹಿನ್ನೆಲೆಯಲ್ಲಿ ಇಂದು ಚಾಕುವಿನಿಂದ ಇರಿದಿದ್ದಾನೆ. ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.
 
ಯುವತಿಯ ಪೋಷಕರು ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರು ದಾಖಲಿಸಿಕೊಂಡ ಪೊಲೀಸರು ಆರೋಪಿಯ ಪತ್ತೆಗೆ ಜಾಲ ಬೀಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ನಕಲಿ ಜಾತಿ ಪ್ರಮಾಣಪತ್ರ ಬಳಸಿ ಪದವಿ, ಕೆಲಸ ಗಿಟ್ಟಿಸಿಕೊಂಡಿದ್ದವರಿಗೆ ಶುರುವಾಯ್ತು ಕಂಟಕ