Select Your Language

Notifications

webdunia
webdunia
webdunia
webdunia

ನಿಗಮ ಮಂಡಳಿ ನೇಮಕಾತಿಯಲ್ಲಿ ಅಸಮಾಧಾನ

ಪರಮೇಶ್ವರ್‌

geetha

bangalore , ಶನಿವಾರ, 27 ಜನವರಿ 2024 (21:04 IST)
ಬೆಂಗಳೂರು :ನಿಗಮ ಮಂಡಳಿಯಲ್ಲಿ ಲಿಂಗಾಯತರಿಗೆ ಹೆಚ್ಚಿನ ಸ್ಥಾನ ದೊರೆತಿರುವ ಹಿನ್ನೆಲೆಯಲ್ಲಿ ದಲಿತ ಮತ್ತು ಒಕ್ಕಲಿಗ ಮುಖಂಡರು ತೀವ್ರ ಅಸಮಧಾನ ವ್ಯಕ್ತಪಡಿಸಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿರಿಸಿಕೊಂಡು ಸಿದ್ದರಾಮಯ್ಯ ಬಣ ಹಾಗೂ ಡಿ.ಕೆ. ಶಿವಕುಮಾರ್‌ ಬಣದ ಮುಖಂಡರಿಗೆ ನಿಮಗ ಮಂಡಳಿ ಅಧ್ಯಕ್ಷ ಸ್ಥಾನ ನೀಡಲಾಗಿದೆ ಎನ್ನಲಾಗಿದೆ. ಇದು ಸಹಜವಾಗಿಯೇ ಇತರೆ ನಾಯಕರನ್ನು ಕೆರಳಿಸಿದೆ.

ನಿಗಮ ಮಂಡಳಿ ನೇಮಕಾತಿಯಲ್ಲಿ ಕಾರ್ಯಕರ್ತರ ಅಸಮಾಧಾನ ಭುಗಿಲೆದ್ದ ಹಿನ್ನೆಲೆಯಲ್ಲಿ ಗೃಹಸಚಿವ ಜಿ. ಪರಮೇಶ್ವರ್‌ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಸದಾಶಿವನಗರದ ಡಿ.ಕೆ.ಶಿವಕುಮಾರ್‌ ಅವರ ಸ್ವಗೃಹದಲ್ಲಿ ಶನಿವಾರ ಭೇಟಿಯಾದ ಪರಮೇಶ್ವರ್‌ ನಿಗಮ ಮಂಡಳಿ ನೇಮಕಾತಿ ಕುರಿತಂತೆ ಮಹತ್ವದ ಮಾತುಕತೆ ನಡೆಸಿದ್ದಾರೆ. ಈ ಹಿಂದೆ ನಿಗಮ ಮಂಡಳಿ ನೇಮಕಾತಿಯಲ್ಲಿ ನನ್ನನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ನನ್ನ ಬಳಿ ಯಾವುದೇ ಚರ್ಚೆ ನಡೆಸಿಲ್ಲ. ಹಿರಿಯನಾದ ನನ್ನನ್ನು ಕೇಳಿದ್ದರೆ ಚೆನ್ನಾಗಿತ್ತು ಎಂದು ಜಿ. ಪರಮೇಶ್ವರ್‌ ಬಹಿರಂಗವಾಗಿಯೇ ಮಾಧ್ಯಮಗಳ ಮುಂದೆ ಅಸಮಾಧಾನ ವ್ಯಕ್ತಪಡಿಸಿದ್ದರು. 
 

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿ ರಾಜ್ಯ‌ ಚುನಾವಣಾ ಉಸ್ತುವಾರಿಗಳ ಪಟ್ಟಿ ಪ್ರಕಟ!