Publish Date: Sat, 26 Aug 2023 (13:08 IST)
Updated Date: Sat, 26 Aug 2023 (13:56 IST)
ಮೈಸೂರು: ಭಾನುವಾರದಿಂದ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಳ್ಳುತ್ತಿರುವ ಹಿನ್ನೆಲೆ, ಆಗಸ್ಟ್ 28 ರಿಂದ 30 ರವರೆಗೆ ಯಾವುದೇ ಅಧಿಕಾರಿಗಳು ರಜೆ ತೆಗೆದುಕೊಳ್ಳದಂತೆ ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.
ಸೋಮವಾರ ಮೈಸೂರಿನಲ್ಲಿ ಸಿಎಂ ಅಧ್ಯಕ್ಷತೆಯಲ್ಲಿ ಕೆಡಿಪಿ ಸಭೆ ನಡೆಯಲಿದೆ. ಆ.30ರಂದು ಗೃಹಲಕ್ಷ್ಮಿ ಯೋಜನೆ ಚಾಲನೆ ಕಾರ್ಯಕ್ರಮದಲ್ಲಿ ಸಿಎಂ ಭಾಗಿಯಾಗಲಿದ್ದಾರೆ.
ದಿನಾಂಕ 27 ರಿಂದ 30 ರ ತನಕ 3 ದಿನಗಳ ಕಾಲ ಮೈಸೂರಿನಲ್ಲೇ ಸಿಎಂ ವಾಸ್ತವ್ಯ ಹೂಡಲಿರುವ ಕಾರಣ ದಿನಾಂಕ 28 ರಿಂದ 30 ರ ತನಕ ಯಾವುದೇ ಅಧಿಕಾರಿಗಳು ರಜೆ ತೆಗೆದುಕೊಳ್ಳದಂತೆ ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.