Publish Date: Thu, 16 Apr 2026 (19:37 IST)
Updated Date: Thu, 16 Apr 2026 (20:10 IST)
ಬೆಂಗಳೂರು: ರಾಜ್ಯದಲ್ಲಿ ಐದು ಜಿಲ್ಲೆಗಳನ್ನು ಹೊರತುಪಡಿಸಿ, ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷಿಸಲಾಗಿದೆ. ಇನ್ನೂ ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗ್ರೂತ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ವಿಧಾನಸೌಧ ಸಭಾಂಗಣದಲ್ಲಿ ಇಂದು ನಡೆದ ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳಲ್ಲಿನ ಕುಡಿಯುವ ನೀರು ಪೂರೈಕೆ ಕುರಿತ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.
ಈ ವರ್ಷ ಮುಂಗಾರಿನಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗುವ ಸಾಧ್ಯತೆಯಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಆಗಸ್ಟ್ ತಿಂಗಳಲ್ಲಿ ವಾಡಿಕೆ ಮಳೆಯಾಗುವ ಸಾಧ್ಯತೆಯಿದ್ದು, ಸೆಪ್ಟಂಬರ್ ತಿಂಗಳಲ್ಲಿ ಮಳೆ ಕಡಿಮೆ ನಿರೀಕ್ಷೆಸಲಾಗಿದೆ.
ಇನ್ನೂ ಜಿಲ್ಲೆಯಲ್ಲಿ ನೀರಿಗೆ ಏನಾದರೂ ತೊಂದರೆಯಾದರೆ ಅದಕ್ಕೆ ಜಿಲ್ಲಾಧಿಖಾರಿಗಳೇ ಹೊಣೆ ಎಂದು ಹೇಳಿದರು.
ಕಂದಾಯ ಇಲಾಖೆ, ಪಂಚಾಯತ್ ರಾಜ್ ಇಲಾಖೆ ಹಾಗೂ ನಗರಾಭಿವೃದ್ಧಿ ಇಲಾಖೆಗಳು ಪರಸ್ಪರ ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸಬೇಕು ಎಂದು ಮುಖ್ಯಮಂತ್ರಿ ಸೂಚಿಸಿದರು.
ಈ ಬಾರಿ ಏಪ್ರಿಲ್-ಜೂನ್ ಅವಧಿಯಲ್ಲಿ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಬಿಸಿಗಾಳಿ ದಿನಗಳು ಕಂಡು ಬರುವ ಸಾಧ್ಯತೆಯಿದೆ.
ಇಂತಹ ಸಂದರ್ಭದಲ್ಲಿ ಯಾವ ರೀತಿಯ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.