Webdunia - Bharat's app for daily news and videos

Install App

ಉದ್ಯಮ ನಿರ್ಮಾಣ ಬದಲು ಭೂಮಿ ಮಾರಾಟ: ವಶಕ್ಕೆ ಮುಂದಾದ ಜಿಲ್ಲಾಡಳಿತ

Webdunia
ಸೋಮವಾರ, 25 ಮೇ 2015 (15:44 IST)
ಉದ್ಯಮ ನಿರ್ಮಾಣ ಹೆಸರಿನಲ್ಲಿ ಪಡೆದಿದ್ದ ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ಬೇರೊಂದು ಕಂಪನಿಗೆ ಮಾರಾಟ ಮಾಡಿದ್ದ ಹಿನ್ನೆಲೆಯಲ್ಲಿ ಆ ಜಾಗವನ್ನು ಮತ್ತೆ ಸರ್ಕಾರದ ವಶಕ್ಕೆ ಪಡೆಯಲು ಜಿಲ್ಲಾ ಪಂಚಾಯತ್ ಮುಂದಾಗಿದ್ದು, ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. 
 
ಜಿಲ್ಲಾಧಿಕಾರಿ ವಿ.ಶಂಕರ್ ಅವರ ನೇತೃತ್ವದಲ್ಲಿ ಈ ಕಾರ್ಯಾಚರಣೆ ಕೈಗೊಳ್ಳಲಾಗಿದ್ದು, ನಗರದ ವೈಟ್‌ಫೀಲ್ಡ್‌ನ ಪಟ್ಟಂದೂರಿನ ಬಳಿ ಇರುವ ಸರ್ವೆ ನಂಬರ್ 42ರಲ್ಲಿನ 3 ಎಕರೆ 23 ಗುಂಟೆ ಜಾಗವನ್ನು ಸರ್ಕಾರದ ವಶಕ್ಕೆ ಪಡೆಯಲಾಗಿದೆ. 
 
ಪ್ರಕರಣದ ಹಿನ್ನೆಲೆ: ಜಾಯ್ ಐಸ್ ಕ್ರೀಂ ಎಂಬ ಕಂಪನಿ ಉದ್ಯಮ ಸ್ಥಾಪನೆಗಾಗಿ ಭೂಮಿ ಕೋರಿ ಮನವಿ ಪತ್ರ ಸಲ್ಲಿಸಿತ್ತು. ಈ ಹಿನ್ನೆಲೆಯಲ್ಲಿ ಅರ್ಜಿಯನ್ನು ಪುರಸ್ಕರಿಸಿದ್ದ ಸರ್ಕಾರದ ಕೆಐಎಡಿಬಿ ಮಂಡಳಿ, ಕಂಪನಿಗೆ 3.23ಗುಂಟೆ ಭೂಮಿ ನೀಡಿತ್ತು. ಆದರೆ ಕಂಪನಿಯು ಇದೇ ಭೂಮಿಯನ್ನು ಉದ್ಯಮ ಸ್ಥಾಪಿಸದೆ ಮತ್ತೊಂದು ಕಂಪನಿ ಪ್ರೆಸ್ಟೀಜ್ ಗ್ರೂಪ್‌ಗೆ ಮಾರಾಟ ಮಾಡಿತ್ತು. ಈ ಹಿನ್ನೆಲೆಯಲ್ಲಿ ಪರಿಶೀಲಿಸಿದ ಜಿಲ್ಲಾಡಳಿತ ಇಂದು ಮತ್ತೆ ವಶಕ್ಕೆ ಪಡೆಯಲು ಮುಂದಾಗಿದೆ. 
 
ಇನ್ನು ಈ ಜಾಗದಲ್ಲಿ ಈಗಾಗಲೇ ಕೆಲವು ಬೃಹತ್ ಬಿಲ್ಡಿಂಗ್‌ಗಳು ತಲೆ ಎತ್ತಿವೆ. ಆದರೆ ಆ ಬಗ್ಗೆ ಸರ್ಕಾರ ಯಾವ ರೀತಿಯ ಕ್ರಮ ಕೈಗೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments