Publish Date: Wed, 18 Jul 2018 (14:26 IST)
Updated Date: Wed, 18 Jul 2018 (14:31 IST)
ಇನ್ನೊಂದು ವಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರನ್ನ ಜಿಲ್ಲೆಗೆ ನಿಯುಕ್ತಿ ಮಾಡಲಾಗುವುದು ಎಂದು
ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಹಾಗೂ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಹಾಗು ಸಂಸದೀಯ ವ್ಯವಹಾರಗಳ ಸಚಿವ ಕೃಷ್ಣ ಭೈರೇಗೌಡ ಹೇಳಿದ್ದಾರೆ. ಗಡಿ ಜಿಲ್ಲೆ ಪ್ರವಾಸದಲ್ಲಿರುವ ಅವರು ಈ ಹೇಳಿಕೆ ನೀಡಿದ್ದಾರೆ.
ಇನ್ನೊಂದು ವಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರನ್ನ ಜಿಲ್ಲೆಗೆ ನಿಯುಕ್ತಿ ಮಾಡಲಾಗುವುದು ಎಂದು ಸಚಿವ ಕೃಷ್ಣ ಭೈರೇಗೌಡ ಹೇಳಿಕೆ ನೀಡಿದ್ದಾರೆ.
ಇನ್ನು ಜಿಲ್ಲೆಯಲ್ಲಿ 411 ಶುದ್ಧ ಕುಡಿಯುವ ನೀರಿನ ಘಟಕ ಬೀದರ್ ಗಡಿ ಜಿಲ್ಲೆಗೆ ಮಂಜೂರು ಆಗಿವೆ. ಇದರಲ್ಲಿ 249 ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆ ಮಾಡಲಾಗಿದೆ. ನಿರ್ಮಾಣವಾದ ಘಟಕಗಲ್ಲಿ 104 ಘಟಕಗಳು ಕಾರ್ಯನಿರ್ವಹಿಸುತ್ತಿಲ್ಲ. ಇನ್ನುಳಿದ 162 ಶುದ್ಧ ಕುಡಿಯುವ ನೀರಿನ ಘಟಕಗಳು ನಿರ್ಮಾಣದ ಹಂತದಲ್ಲಿ ಇವೆ. ಕೆಟ್ಟು ಹೋದ ಶುದ್ಧ ಕುಡಿಯುವ ನೀರಿನ ಘಟಕಗಳನ್ನ ಇನ್ನೊಂದು ವಾರದಲ್ಲಿ ರಿಪೇರಿ ಮಾಡುವಂತೆ ಕೆಆರ್ ಐ ಡಿ ಎಲ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇದಕ್ಕಾಗಿ ಒಂದು ಕೋಟಿ ಹಣ ಬಿಡುಗಡೆಗೊಳಿಸಲಾಗುವುದು ಎಂದು ಸಚಿವ ಬೈರೇ ಕೃಷ್ಣ ಗೌಡ ಹೇಳಿಕೆ ನೀಡಿದ್ದಾರೆ.