Select Your Language

Notifications

webdunia
webdunia
webdunia
webdunia

ದೀಪಾವಳಿ ಹಬ್ಬಕ್ಕೆ ಬೆಲೆ ಏರಿಕೆಯ ಬಿಸಿ

ದೀಪಾವಳಿ ಹಬ್ಬಕ್ಕೆ ಬೆಲೆ ಏರಿಕೆಯ ಬಿಸಿ
bangalore , ಭಾನುವಾರ, 23 ಅಕ್ಟೋಬರ್ 2022 (20:27 IST)
ಬೆಳಕಿನ ಹಬ್ಬ ದೀಪಾವಳಿ ಆಚರಣೆ ಹತ್ತಿರ ಬರುತ್ತಿದ್ದಂತೆ ಬೆಲೆ ಏರಿಕೆಯ ಬಿಸಿಯೂ ಹೆಚ್ಚಾಗುತ್ತಿದೆ. ನಾಳೆಯಿಂದ ಮೂರು ದಿನಗಳ ಕಾಲ ದೀಪಾವಳಿ ಹಬ್ಬದ ಆಚರಣೆಗೆ ಬೆಂಗಳೂರಿನ ವಿವಿಧ ಮಾರುಕಟ್ಟೆಗಳಲ್ಲಿ ಜನರು ನೂಕುನುಗ್ಗಲಿನಲ್ಲಿಯೂ ನಿಂತು ಅಗತ್ಯ ವಸ್ತುಗಳನ್ನು ಖರೀದಿ ಮಾಡುತ್ತಿದ್ದಾರೆ. ಬೆಂಗಳೂರಿನ ಕೆ.ಆರ್ ಮಾರುಕಟ್ಟೆಯಲ್ಲಿ‌  ದೀಪಾವಳಿ ಹಬ್ಬಕ್ಕೆ ಸಾಮಾಗ್ರಿ ಖರೀದಿಸುವವರಿಗೆ ಬೆಲೆ ಏರಿಕೆಯ ಬಿಸಿಗೆ  ಕಂಗಾಲಾಗಿದ್ದಾರೆ. ಹೂವು, ಹಣ್ಣು, ಪೂಜಾ ಸಾಮಾಗ್ರಿ ದರ ಗಗನಕ್ಕೇರಿದೆ. ಅಲ್ಲದೇ ದೀಪಾವಳಿ ಹಬ್ಬಕ್ಕೆ ಅಗತ್ಯವಿರುವ ಇತರ ವಸ್ತುಗಳ ಬೆಲೆಯೂ ಹೆಚ್ಚಾಗಿದೆ. ಕಳೆದ ಎರಡು ವರ್ಷಗಳಿಂದ ಕೊರೊನಾ ಕಾರಣಕ್ಕೆ ಸಂಭ್ರಮದ ಆಚರಣೆ ಸಾಧ್ಯವಾಗಿರಲಿಲ್ಲ. ಹೀಗಾಗಿ ಈ ವರ್ಷ ಸಂಭ್ರಮದ ದೀಪಾವಳಿ ಆಚರಣೆಗೆ ಜನರು ಮುಂದಾಗಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ರಸ್ತೆ ಗುಂಡಿಗೆ ಬಿದ್ದು ಕತ್ತು- ಭುಜದ ಮೂಳೆ ಮುರಿದುಕೊಂಡ ಬೈಕ್ ಸವಾರ