Select Your Language

Notifications

webdunia
webdunia
webdunia
webdunia

ಕಾವೇರಿ ವಿಚಾರದಲ್ಲಿ ಡಿಕೆಶಿ ಕೇರ್‌ಲೆಸ್‌ ವರ್ತನೆ

Cauvery issue
bangalore , ಸೋಮವಾರ, 21 ಆಗಸ್ಟ್ 2023 (19:04 IST)
ಕಾವೇರಿ ವಿಚಾರದಲ್ಲಿ ಸಚಿವ ಚಲುವರಾಯಸ್ವಾಮಿ- ಡಿಸಿಎಂ ಡಿ.ಕೆ.ಶಿವಕುಮಾರ್​ ಬೇಜವಾಬ್ದಾರಿ ತೋರುತ್ತಿದ್ದಾರೆ ಅಂತಾ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥ್ ನಾರಾಯಣ್ ಹೇಳಿಕೆ ನೀಡಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಅವರು, ಸುಪ್ರೀಂ ಕೋರ್ಟ್​​​​ಗೆ ಅರ್ಜಿ ಕೊಟ್ಟರೂ ತಮಿಳುನಾಡಿಗೆ ನೀರು ಬಿಡುವ ಅವಶ್ಯಕತೆ ಏನಿತ್ತು..? ಸುಪ್ರೀಂ ಕೋರ್ಟ್ ತಮಿಳುನಾಡಿನ ಅರ್ಜಿ ಸ್ವೀಕರಿಸಿದೆ. ತಮಿಳುನಾಡಿನ ಡ್ಯಾಂಗಳಲ್ಲಿ ನೀರು ಸ್ಟಾಕ್ ಇದೆ. ಡಿ.ಕೆ.ಶಿವಕುಮಾರ್ ಬೆಂಗಳೂರಿನಲ್ಲಿ ಮೀಟಿಂಗ್ ಕರೆದು ಚಿಟ್ ಚಾಟ್ ಮಾಡ್ಕೊಂಡು ಕಾಲಹರಣ ಮಾಡ್ತಿದ್ದಾರೆ. ಯಾವುದೇ ಡ್ಯಾಂಗೆ ಭೇಟಿ ಕೊಟ್ಟಿಲ್ಲ, ರೈತರ ಪರಿಸ್ಥಿತಿ ಬಗ್ಗೆ ಗಮನಹರಿಸುತ್ತಿಲ್ಲ. ರೈತರ ಪರಿಸ್ಥಿತಿ ಏನಾಗಬೇಕು? ಚಲುವರಾಯಸ್ವಾಮಿ ಹಾಗೂ ಡಿ.ಕೆ.ಶಿವಕುಮಾರ್​ ಬಹಳ ಕೇರ್ಲೆಸ್ ಆಗಿ ನಡೆದುಕೊಳ್ಳುತ್ತಿದ್ದಾರೆ. ಎರಡು ರಾಜ್ಯದ ನೀರಿನ ಲಭ್ಯತೆ ಬಗ್ಗೆ ಗಮನ ಇಟ್ಟುಕೊಳ್ಳಬೇಕು. ನೀರಾವರಿ ಸಚಿವರಿಗೆ ಜವಾಬ್ದಾರಿ ಇಲ್ಲ. ಇವತ್ತು ಒಂದು ದಿನ ನಮ್ಮ ಹೋರಾಟ ಅಲ್ಲ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುತ್ತೇವೆ ಎಂದರು.

Share this Story:

Follow Webdunia kannada

ಮುಂದಿನ ಸುದ್ದಿ

ಕಾವೇರಿ ನಮ್ಮ ತಾಯಿ.. ರಾಜಕೀಯ ಬೇಡ