ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಕೇಸ್ ನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಹೆಸರು ಕೇಳಿಬಂದಿದೆ. ಇದರ ಬಗ್ಗೆ ಪ್ರತಿಕ್ರಿಯಿಸಿರುವ ಅವರು ಹೌದು, ನಾನು ನಮ್ಮ ಪತ್ರಿಕೆಗೆ 25 ಲಕ್ಷ ರೂ. ದೇಣಿಗೆ ನೀಡಿದ್ದೆ ಎಂದು ಒಪ್ಪಿಕೊಂಡಿದ್ದಾರೆ.
ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ ಕರ್ನಾಟಕದ ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಅವರ ಸಹೋದರ 2.5 ಕೋಟಿ ರೂ. ನೀಡಿದ್ದಾರೆ ಎಂದು ಹೇಳಿದೆ.
ಇದರೊಂದಿಗೆ ಡಿಕೆಶಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದರ ಬಗ್ಗೆ ಪ್ರತಿಕ್ರಿಯಿಸಿರುವ ಅವರು ಹೌದು ಅದು ನಮ್ಮ ಪತ್ರಿಕೆ ಎಂದು 25 ಲಕ್ಷ ರೂ. ದೇಣಿಗೆ ನೀಡಿದ್ದೆ. ಅದರಲ್ಲಿ ತಪ್ಪೇನು ಎಂದು ಪ್ರಶ್ನೆ ಮಾಡಿದ್ದಾರೆ. ಇಡಿ ಸಲ್ಲಿಸಿರುವ ಚಾರ್ಜ್ ಶೀಟ್ ನಲ್ಲಿ ಈಗ ಡಿಕೆ ಬ್ರದರ್ಸ್ ಹೆಸರೂ ಸೇರ್ಪಡೆಯಾಗಿದೆ.
ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಕೂಡಾ ದೇಣಿಗೆ ನೀಡಿದ್ದಾರೆ. ಎಲ್ಲರಿಗೂ ದೇಣಿಗೆ ನೀಡಲು ಹೈಕಮಾಂಡ್ ಸೂಚನೆ ನೀಡಿತ್ತು ಎನ್ನಲಾಗಿದೆ. ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ 142 ಕೋಟಿ ರೂ. ಗಳನ್ನು ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ದುರ್ಬಳಕೆ ಮಾಡಿದ್ದಾರೆ ಎಂದು ಇಡಿ ಆರೋಪಿಸಿದೆ.