Publish Date: Sun, 03 May 2026 (17:16 IST)
Updated Date: Sun, 03 May 2026 (17:18 IST)
ರಾಯಚೂರು: ಜಿಲ್ಲೆಯ ಸಿಂಧನೂರಿನಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ನಟ ಸುದೀಪ್ ಭಾಗವಹಿಸಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ತೊಂದರೆಯಾಗಿಲ್ಲ.
ಸಿಂಧನೂರಿನ ತಾಲೂಕು ಕ್ರೀಡಾಂಗಣದಲ್ಲಿ ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿ ಫೌಂಡೇಷನ್ ಆಯೋಜಿಸಿದ್ದ 151 ಜೋಡಿ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಈ ಅವಘಡ ಸಂಭವಿಸಿದೆ.
ಅರಣ್ಯ ಸಚಿವ ಈಶ್ವರ ಖಂಡ್ರೆ ಮಾಧ್ಯಮಗಳೊಂದಿಗೆ ಮಾತನಾಡಲು ಆಗಮಿಸುತ್ತಿದ್ದಂತೆ ವೇದಿಕೆ ಬಳಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ.
ಸ್ಥಳದಲ್ಲಿದ್ದ ಪೊಲೀಸ್ ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಕೂಡಲೇ ಬೆಂಕಿ ನಂದಿಸಿದ್ದಾರೆ. ಯಾವುದೇ ಅನಾಹುತ ಸಂಭವಿಸಿಲ್ಲ, ಅಗ್ನಿಶಾಮಕ ದಳ ಅಲರ್ಟ್ ಆಗಿದ್ದರಿಂದ ಬೆಂಕಿ ಅವಘಡ ತಪ್ಪಿದೆ.