Webdunia - Bharat's app for daily news and videos

Install App

ಗೃಹಲಕ್ಷ್ಮಿ ಹಣ ಯಾವಾಗ ಬರುತ್ತೆ ಪ್ರಶ್ನೆಗೆ ಡಿಕೆ ಶಿವಕುಮಾರ್ ಕೊಟ್ಟ ಅಪ್ಡೇಟ್ ಇಲ್ಲಿದೆ

Krishnaveni K
ಮಂಗಳವಾರ, 6 ಆಗಸ್ಟ್ 2024 (10:27 IST)
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರ ಜಾರಿ ಮಾಡಿರುವ ಗ್ಯಾರಂಟಿ ಯೋಜನೆಗಳ ಪೈಕಿ ಗೃಹಲಕ್ಷ್ಮಿ ಯೋಜನೆ ಕೂಡಾ ಒಂದು. ಅದರೆ ಕಳೆದ ಎರಡು ತಿಂಗಳಿನಿಂದ ಗೃಹಲಕ್ಷ್ಮಿ ಹಣ ಬಂದಿಲ್ಲ. ಈ ಬಗ್ಗೆ ಈಗ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬಿಗ್ ಅಪ್ಡೇಟ್ ಕೊಟ್ಟಿದ್ದಾರೆ.

ಗೃಹಲಕ್ಷ್ಮಿ ಯೋಜನೆಯಲ್ಲಿ ಮನೆ ಯಜಮಾನಿ ಬ್ಯಾಂಕ್ ಖಾತೆಗೆ 2,000 ರೂ. ಪ್ರತೀ ತಿಂಗಳು ಬರಲಿದೆ. ಆದರೆ ಕಳೆದ ಎರಡು ತಿಂಗಳಿನಿಂದ ಗೃಹಲಕ್ಷ್ಮಿ ಹಣ ಖಾತೆಗೆ ಜಮಾವಣೆಯಾಗಿಲ್ಲ. ಈ ಬಗ್ಗೆ ಮಹಿಳೆಯರಿಂದ ಭಾರೀ ಆಕ್ರೋಶ ವ್ಯಕ್ತವಾಗಿದೆ. ಎಲ್ಲೇ ಹೋದರೂ ಸರ್ಕಾರದ ಸಚಿವರು, ಶಾಸಕರು, ಅಧಿಕಾರಿಗಳಿಗೆ ಹಣ ಯಾವಾಗ ಬರುತ್ತದೆ ಎಂಬ ಪ್ರಶ್ನೆ ಬರುತ್ತಿದೆ.

ನಿನ್ನೆಯಷ್ಟೇ ಸಿಎಂ ಸಿದ್ದರಾಮಯ್ಯ ಕೂಡಾ ಸದ್ಯದಲ್ಲೇ ಗೃಹಲಕ್ಷ್ಮಿ ಹಣ ಜಮಾವಣೆಗೆ ವ್ಯವಸ್ಥೆ ಮಾಡುವುದಾಗಿ ಹೇಳಿದ್ದಾರೆ. ಇದೀಗ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೂಡಾ ಇದೇ ಪ್ರಶ್ನೆ ಎದುರಾಗಿದೆ. ಮದ್ದೂರಿನಲ್ಲಿ ಜನಾಂದೋಲನ ಸಭೆಯಲ್ಲಿ ಡಿಕೆ ಶಿವಕುಮಾರ್ ವೇದಿಕೆಯಲ್ಲಿ ಭಾಷಣ ಮಾಡುವಾಗ ಗೃಹಲಕ್ಷ್ಮಿ ಹಣ ಬರುತ್ತೋ ಇಲ್ವೋ ಎಂದು ಕೇಳಿದರು. ಇದಕ್ಕೆ ಮಹಿಳೆಯರು ಬರುತ್ತಿಲ್ಲ ಎಂದು ಕೂಗಿದ್ದಾರೆ.

ತಕ್ಷಣವೇ ಸಮಜಾಯಿಷಿ ನೀಡಿದ ಡಿಕೆಶಿ, ಬರುತ್ತೆ, ಬರುತ್ತೆ ಕಾಯುತ್ತಿರಿ. ಎರಡು ತಿಂಗಳ ಹಣ ಮಾತ್ರ ಜಮಾವಣೆ ಆಗಿಲ್ಲ. ಈಗ ಅನುದಾನ ಬಿಡುಗಡೆಯಾಗಿದೆ. ಸದ್ಯದಲ್ಲೇ ನಿಮ್ಮ ಖಾತೆಗಳಿಗೆ ಹಣ ಬರಲಿದೆ ಎಂದಿದ್ದಾರೆ. ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಎರಡು ತಿಂಗಳ ಹಣ ಒಟ್ಟಿಗೇ ಬಿಡುಗಡೆಯಾಗಿತ್ತು. ಅದಾದ ಬಳಿಕ ಜೂನ್, ಜುಲೈ ತಿಂಗಳಲ್ಲಿ ಹಣ ಬಿಡುಗಡೆಯಾಗಿರಲಿಲ್ಲ.  ಈ ಹಣ ಆಗಸ್ಟ್ ವಾರಂತ್ಯದೊಳಗೆ ಜಮಾವಣೆ ಆಗಲಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

Raghuvanshi Murder Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Mallikarjun Kharge: 11 ವರ್ಷಗಳ ಮೋದಿಯ ತಪ್ಪುಗಳ ಲೆಕ್ಕ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

Mangaluru: ಬಾಲ್ಯದ ಕನಸ್ಸಿನಂತೆ ನೌಕಾಪಡೆ ಸೇರಿಕೊಂಡ ಮಂಗಳೂರಿನ ಯುವತಿ

Karnataka Weather: 48 ಗಂಟೆಗಳಲ್ಲಿ ಈ ಭಾಗದಲ್ಲಿ ಭಾರೀ ಮಳೆ, ರೆಡ್ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments