ಬೆಂಗಳೂರು: ನವಂಬರ್ ಕ್ರಾಂತಿ ಚರ್ಚೆ ನಡುವೆ ಡಿಕೆ ಶಿವಕುಮಾರ್ ಬೆಂಬಲಿಗರು ದೆಹಲಿ ಯಾತ್ರೆ ಕೈಗೊಳ್ಳುತ್ತಿರುವುದು ರಾಜ್ಯ ರಾಜಕೀಯದಲ್ಲಿ ಭಾರೀ ಕುತೂಹಲಕ್ಕೆ ಕಾರಣವಾಗಿದೆ.
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಜೋರಾಗಿಯೇ ನಡೆಯುತ್ತಿದೆ. ಈಗಾಗಲೇ ಡಿಕೆ ಶಿವಕುಮಾರ್ ಮತ್ತು ಸಿಎಂ ಸಿದ್ದರಾಮಯ್ಯ ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಬಂದಿದ್ದರು. ಸಿಎಂ ಆಗುವ ಕನಸು ಇಟ್ಟುಕೊಂಡಿರುವ ಡಿಕೆಶಿ ಹೈಕಮಾಂಡ್ ಮುಂದೆ ತಮ್ಮ ಬೇಡಿಕೆ ಸಲ್ಲಿಸಿದ್ದಾರೆ ಎನ್ನಲಾಗುತ್ತಿದೆ.
ಇದರ ನಡುವೆ ಈಗ ಡಿಕೆ ಶಿವಕುಮಾರ್ ಪರ ಇರುವ ಶಾಸಕರ ದಂಡು ದೆಹಲಿ ಯಾತ್ರೆ ನಡೆಸುತ್ತಿದೆ. ಸಚಿವ ಚೆಲುವರಾಯ ಸ್ವಾಮಿ, ಇಕ್ಬಾಲ್ ಹುಸೇನ್, ಮಾಗಡಿ ಬಾಲಕೃಷ್ಣ, ರವಿ ಗಣಿಗ ಮೊದಲಾದವರು ಇಂದು ದೆಹಲಿಗೆ ತೆರಳಿದ್ದಾರೆ.
ಈ ನಾಯಕರು ಡಿಕೆಶಿ ಪರ ಬ್ಯಾಟಿಂಗ್ ಮಾಡುವ ನಿರೀಕ್ಷೆಯಿದೆ. ಇನ್ನೂ ಕೆಲವು ಶಾಸಕರು ನಾಳೆ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ ಎನ್ನಲಾಗುತ್ತಿದೆ. ಬಿಹಾರ ಚುನಾವಣೆ ಫಲಿತಾಂಶದ ಬಳಿಕ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಮತ್ತಷ್ಟು ಗರಿಗೆದರಿದೆ.