ಬೆಂಗಳೂರು: ಸಿದ್ದರಾಮಯ್ಯನವರೇ ಪೂರ್ಣಾವಧಿ ಸಿಎಂ ಎಂದು ನಿನ್ನೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದ ಡಾ ಯತೀಂದ್ರಗೆ ಡಿಕೆ ಶಿವಕುಮಾರ್ ಶಾಕಿಂಗ್ ಕೌಂಟರ್ ಕೊಟ್ಟಿದ್ದಾರೆ.
ನಿನ್ನೆ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಸಿಎಂ ಸಿದ್ದರಾಮಯ್ಯ ಪುತ್ರ, ವಿಧಾನಪರಿಷತ್ ಸದಸ್ಯ ಯತೀಂದ್ರ, ತಂದೆಯವರೇ ಐದು ವರ್ಷ ಸಿಎಂ ಆಗಿ ಅಧಿಕಾರವಧಿ ಪೂರ್ಣಗೊಳಿಸಲಿದ್ದಾರೆ. ಡಿಕೆ ಶಿವಕುಮಾರ್ ಹೈಕಮಾಂಡ್ ಬಳಿ ಅವಕಾಶ ಕೇಳಿದ್ದಾರೆ. ಆದರೆ ಹೈಕಮಾಂಡ್ ಒಪ್ಪಿಲ್ಲ ಎಂದು ಹೇಳಿಕೆ ನೀಡಿದ್ದರು.
ಅವರ ಹೇಳಿಕೆ ಒಮ್ಮೆ ತಣ್ಣಗಾಗಿದ್ದ ನಾಯಕತ್ವ ವಿವಾದ ಮತ್ತೆ ಭುಗಿಲೇಳುವಂತೆ ಮಾಡಿದೆ. ಇದು ಡಿಕೆಶಿ ಬಣದಲ್ಲಿ ಅಸಮಾಧಾನದ ಅಲೆ ಎಬ್ಬಿಸಿದೆ. ಸಿದ್ದರಾಮಯ್ಯ ಪುತ್ರನ ಹೇಳಿಕೆ ಬಗ್ಗೆ ಮಾಧ್ಯಮಗಳು ಡಿಕೆ ಶಿವಕುಮಾರ್ ಪ್ರತಿಕ್ರಿಯೆ ಕೇಳಿವೆ.
ಇದಕ್ಕೆ ಉತ್ತರಿಸಿರುವ ಅವರು ಬಹಳ ಸಂತೋಷ, ರಾಜ್ಯಕ್ಕೆ ಒಳ್ಳೆಯದಾಗಲಿ ಎಂದಷ್ಟೇ ಹೇಳಿ ಅಚ್ಚರಿ ಮೂಡಿಸಿದ್ದಾರೆ. ಬೆಳಗಾವಿಗೆ ತೆರಳುವ ಮುನ್ನ ಮಾಧ್ಯಮಗಳಿಗೆ ಡಿಕೆಶಿ ಎರಡೇ ಮಾತಿನಲ್ಲಿ ಕೌಂಟರ್ ಕೊಟ್ಟಿದ್ದಾರೆ.