ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂದ ಯತೀಂದ್ರ ಡಿಕೆ ಶಿವಕುಮಾರ್ ಶಾಕಿಂಗ್ ಕೌಂಟರ್

Krishnaveni K
ಮಂಗಳವಾರ, 9 ಡಿಸೆಂಬರ್ 2025 (09:17 IST)
ಬೆಂಗಳೂರು: ಸಿದ್ದರಾಮಯ್ಯನವರೇ ಪೂರ್ಣಾವಧಿ ಸಿಎಂ ಎಂದು ನಿನ್ನೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದ ಡಾ ಯತೀಂದ್ರಗೆ ಡಿಕೆ ಶಿವಕುಮಾರ್ ಶಾಕಿಂಗ್ ಕೌಂಟರ್ ಕೊಟ್ಟಿದ್ದಾರೆ.

ನಿನ್ನೆ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಸಿಎಂ ಸಿದ್ದರಾಮಯ್ಯ ಪುತ್ರ, ವಿಧಾನಪರಿಷತ್ ಸದಸ್ಯ ಯತೀಂದ್ರ, ತಂದೆಯವರೇ ಐದು ವರ್ಷ ಸಿಎಂ ಆಗಿ ಅಧಿಕಾರವಧಿ ಪೂರ್ಣಗೊಳಿಸಲಿದ್ದಾರೆ. ಡಿಕೆ ಶಿವಕುಮಾರ್ ಹೈಕಮಾಂಡ್ ಬಳಿ ಅವಕಾಶ ಕೇಳಿದ್ದಾರೆ. ಆದರೆ ಹೈಕಮಾಂಡ್ ಒಪ್ಪಿಲ್ಲ ಎಂದು ಹೇಳಿಕೆ ನೀಡಿದ್ದರು.

ಅವರ ಹೇಳಿಕೆ ಒಮ್ಮೆ ತಣ್ಣಗಾಗಿದ್ದ ನಾಯಕತ್ವ ವಿವಾದ ಮತ್ತೆ ಭುಗಿಲೇಳುವಂತೆ ಮಾಡಿದೆ. ಇದು ಡಿಕೆಶಿ ಬಣದಲ್ಲಿ ಅಸಮಾಧಾನದ ಅಲೆ ಎಬ್ಬಿಸಿದೆ. ಸಿದ್ದರಾಮಯ್ಯ ಪುತ್ರನ ಹೇಳಿಕೆ ಬಗ್ಗೆ ಮಾಧ್ಯಮಗಳು ಡಿಕೆ ಶಿವಕುಮಾರ್ ಪ್ರತಿಕ್ರಿಯೆ ಕೇಳಿವೆ.

ಇದಕ್ಕೆ ಉತ್ತರಿಸಿರುವ ಅವರು ‘ಬಹಳ ಸಂತೋಷ, ರಾಜ್ಯಕ್ಕೆ ಒಳ್ಳೆಯದಾಗಲಿ’ ಎಂದಷ್ಟೇ ಹೇಳಿ ಅಚ್ಚರಿ ಮೂಡಿಸಿದ್ದಾರೆ. ಬೆಳಗಾವಿಗೆ ತೆರಳುವ ಮುನ್ನ ಮಾಧ್ಯಮಗಳಿಗೆ ಡಿಕೆಶಿ ಎರಡೇ ಮಾತಿನಲ್ಲಿ ಕೌಂಟರ್ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂಗಳನ್ನು ಟಾರ್ಗೆಟ್ ಮಾಡಲಾಗಿದೆ: ಡಿಸಿಎಂ ಪವನ್ ಕಲ್ಯಾಣ್

ರಾಜ್ಯದಲ್ಲಿರುವ ಡ್ರಗ್ಸ್‌ ದಂಧೆ ವಿರುದ್ಧ ಕಠಿಣ ಕ್ರಮ, ಪೆಡ್ಲರ್‌ಗಳಿಗೆ ನಡುಕ

ಮತ್ತಷ್ಟು ಹಣ ಕೊಡದಿದ್ದರೆ ಬೆತ್ತಲೆ ಫೋಟೋ ವೈರಲ್ ಬೆದರಿಕೆ, ಯುವಕ ಆತ್ಮಹತ್ಯೆ

ಮೋದಿ ಬಳಿಕ ಬಿಜೆಪಿಯಿಂದ ಪ್ರಧಾನಿ ಅಭ್ಯರ್ಥಿ ಯಾರು: ಕೊನೆಗೂ ತಿಳಿಸಿದ ಮೋಹನ್ ಭಾಗವತ್

ಸಿದ್ದರಾಮಯ್ಯ ಇರುವಷ್ಟು ದಿನ ಉತ್ತಮ ಹೆಜ್ಜೆ ಇಡಲಿ: ವಿಜಯೇಂದ್ರ

ಮುಂದಿನ ಸುದ್ದಿ
Show comments