Publish Date: Sun, 14 Feb 2021 (09:18 IST)
Updated Date: Sun, 14 Feb 2021 (09:21 IST)
ಬೆಂಗಳೂರು: ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಪುತ್ರಿ ಐಶ್ವರ್ಯಾ ಮತ್ತು ಮಾಜಿ ಸಿಎಂ ಎಸ್ ಎಂ ಕೃಷ್ಣ ಮೊಮ್ಮಗ ಅಮರ್ಥ್ಯ ಹೆಗಡೆ ವಿವಾಹ ಸಮಾರಂಭ ಬೆಂಗಳೂರಿನಲ್ಲಿ ಇಂದು ನಡೆದಿದೆ.
ಬೆಳಗಿನ ಶುಭ ಮುಹೂರ್ತದಲ್ಲಿ ಐಶ್ವರ್ಯಾ ಹಾಗೂ ಅಮರ್ಥ್ಯ ಸಾಂಪ್ರದಾಯಿಕವಾಗಿ ಹಾರ ಬದಲಾಯಿಸಿಕೊಂಡಿದ್ದು, ಶಾಸ್ತ್ರಗಳಲ್ಲಿ ಪಾಲ್ಗೊಂಡಿದ್ದಾರೆ. ಎರಡೂ ಕುಟುಂಬಗಳು ಮತ್ತು ಆತ್ಮೀಯರಿಗೆ ಮದುವೆಗೆ ಆಹ್ವಾನ ನೀಡಲಾಗಿದೆ. ರಾಜ್ಯ ಮತ್ತು ಕೇಂದ್ರದ ಕೆಲವು ರಾಜಕೀಯ ನಾಯಕರು ಮದುವೆಗೆ ಆಗಮಿಸುವ ನಿರೀಕ್ಷೆಯಿದೆ.