ಬೆಳಗಾವಿ: ಮೊನ್ನೆ ಸಿದ್ದರಾಮಯ್ಯ ಬಣ ಡಿನ್ನರ್ ಮೀಟಿಂಗ್ ನಡೆಸಿದ್ದರೆ ಅವರಿಗೆ ಕೌಂಟರ್ ಕೊಡಲು ಡಿಕೆ ಶಿವಕುಮಾರ್ ನಿನ್ನೆ ರಾತ್ರಿ ಮಹತ್ವದ ಹೆಜ್ಜೆಯಿಟ್ಟಿದ್ದಾರೆ.
ಸಿದ್ದರಾಮಯ್ಯ ಬಣಕ್ಕೆ ಕೌಂಟರ್ ಆಗಿ ಡಿಕೆ ಶಿವಕುಮಾರ್ ಕೂಡಾ ನಿನ್ನೆ ರಾತ್ರಿ ಡಿನ್ನರ್ ಮೀಟಿಂಗ್ ನಡೆಸಿದ್ದಾರೆ. ಈ ಸಭೆಯಲ್ಲಿ 30 ಕ್ಕೂ ಹೆಚ್ಚು ಶಾಸಕರು ಭಾಗಿಯಾಗಿದ್ದಾರೆ ಎಂಬ ಮಾಹಿತಿಯಿದೆ. ಬೆಳಗಾವಿಯಲ್ಲಿ ಅಧಿವೇಶನದ ನಡುವೆಯೂ ತಮ್ಮ ಆಪ್ತ ಬಣದ ಶಾಸಕರಿಗೆ ಡಿಕೆಶಿ ಔತಣಕೂಟ ಆಯೋಜಿಸಿದ್ದರು.
ಬ್ರೇಕ್ ಫಾಸ್ಟ್ ಮೀಟಿಂಗ್ ಬಳಿಕ ಡಿಕೆ ಶಿವಕುಮಾರ್ ಸೈಲೆಂಟ್ ಆಗಿದ್ದರು. ಆದರೆ ಮೊನ್ನೆಯಷ್ಟೇ ಯತೀಂದ್ರ ಸಿದ್ದರಾಮಯ್ಯ ಸಿಎಂ ಬದಲಾವಣೆ ಹೇಳಿಕೆ ನೀಡಿದ ಬಳಿಕ ಪರಿಸ್ಥಿತಿ ಬದಲಾಗಿದೆ. ಸಿದ್ದರಾಮಯ್ಯ ನೇತೃತ್ವದಲ್ಲಿ ಅಹಿಂದ ನಾಯಕರು ಡಿನ್ನರ್ ಮೀಟಿಂಗ್ ನಡೆಸಿದ್ದು ಡಿಕೆಶಿ ಬಣ ಕೆರಳುವಂತೆ ಮಾಡಿದೆ.
ಇದೇ ಕಾರಣಕ್ಕೆ ಈಗ ಡಿಕೆಶಿ ಬಣ ಡಿನ್ನರ್ ಮೀಟಿಂಗ್ ನಡೆಸಿದೆ. ಈ ವೇಳೆ ಸಚಿವ ಶರಣಪ್ರಕಾಶ್ ಪಾಟೀಲ್, ಎಂಸಿ ಸುಧಾಕರ್, ಕೆಎಚ್ ಮುನಿಯಪ್ಪ ಸೇರಿದಂತೆ ಪ್ರಮುಖ ನಾಯಕರು ಭಾಗಿಯಾಗಿದ್ದರು ಎನ್ನಲಾಗಿದೆ. ಸ್ವತಃ ಡಿಕೆ ಸುರೇಶ್ ಅವರೇ ಸಭೆಯ ನೇತೃತ್ವ ವಹಿಸಿದ್ದರು ಎನ್ನಲಾಗಿದೆ. ಸಭೆಯಲ್ಲಿ ಡಿಕೆ ಶಿವಕುಮಾರ್ ಗೆ ಸಿಎಂ ಸ್ಥಾನ ನೀಡಲು ತಮ್ಮ ಬೆಂಬಲವಿರುವುದಾಗಿ ಈ ನಾಯಕರು ಹೇಳಿದ್ದಾರೆ ಎನ್ನಲಾಗಿದೆ. ಅಲ್ಲದೆ, ಪದೇ ಪದೇ ಬಹಿರಂಗ ಹೇಳಿಕೆ ನೀಡುತ್ತಿರುವ ಯತೀಂದ್ರ ವಿರುದ್ಧವೂ ಕ್ರಮಕ್ಕೆ ಒತ್ತಾಯಿಸಿದ್ದಾರೆ ಎನ್ನಲಾಗುತ್ತಿದೆ. ಹೀಗಾಗಿ ಈ ಮೀಟಿಂಗ್ ಮಹತ್ವ ಪಡೆದುಕೊಂಡಿದೆ.