Daily Horoscope

Select Your Language

Notifications

webdunia
webdunia
webdunia
webdunia

ಡಿಕೆ ಶಿವಕುಮಾರ್ ಡಿನ್ನರ್ ಪಾರ್ಟಿಯಲ್ಲಿ ಸಿದ್ದರಾಮಯ್ಯ ನೀಡಿದ ಹೇಳಿಕೆ ಸಂಚಲನ ಮೂಡಿಸಿದೆ

Siddaramaiah-DK Shivakumar
Photo Credit: X
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷವಾದ ಹಿನ್ನಲೆಯಲ್ಲಿ ಡಿಕೆ ಶಿವಕುಮಾರ್ ನೀಡಿದ್ದ ಔತಣಕೂಟದಲ್ಲಿ ಸಿಎಂ ಸಿದ್ದರಾಮಯ್ಯ ನೀಡಿದ ಹೇಳಿಕೆ ಸಂಚಲನ ಮೂಡಿಸಿದೆ.

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ ಪೂರ್ತಿಯಾದ ಹಿನ್ನಲೆಯಲ್ಲಿ ಡಿಕೆ ಶಿವಕುಮಾರ್ ಕಾಂಗ್ರೆಸ್ ನ ಎಲ್ಲಾ ಶಾಸಕರಿಗೂ ಔತಣಕೂಟ ನೀಡಿದ್ದರು. ಈ ಔತಣಕೂಟಕ್ಕೆ ಸಿಎಂ ಸಿದ್ದರಾಮಯ್ಯ ಕೂಡಾ ಬಂದಿದ್ದರು. ಈ ವೇಳೆ ಡಿಕೆಶಿಗೆ ಶುಭ ಹಾರೈಸಿದ ಅವರು ಮಹತ್ವದ ಹೇಳಿಕೆ ನೀಡಿದ್ದಾರೆ.

ನನಗಿಂತ ಕಿರಿಯವರಾದ ಡಿಕೆ ಶಿವಕುಮಾರ್ ಗೆ ರಾಜಕೀಯದಲ್ಲಿ ಉಜ್ವಲ ಭವಿಷ್ಯವಿದೆ. 2028 ರಲ್ಲಿ ಅವರ ನಾಯಕತ್ವದಲ್ಲೇ ಚುನಾವಣೆ ಗೆದ್ದು ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲಿ. ಅವರ ಜೊತೆಗೆ ನಾನಿದ್ದೇನೆ ಎಂದಿದ್ದಾರೆ.

ಆ ಮೂಲಕ ಮುಂದಿನ ಚುನಾವಣೆಯಲ್ಲಿ ಡಿಕೆ ಶಿವಕುಮಾರ್ ಅವರೇ ನಾಯಕತ್ವ ವಹಿಸಲಿದ್ದಾರೆ, ಅವರೇ ಸಿಎಂ ಅಭ್ಯರ್ಥಿಯಾಗುವುದಕ್ಕೆ ತಮ್ಮ ಬೆಂಬಲವಿದೆ ಎಂದು ಪರೋಕ್ಷವಾಗಿ ಸಂದೇಶ ರವಾನಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

LPG ಸಿಗದೇ ದೇವಸ್ಥಾನದಲ್ಲೂ ಊಟ ಸ್ಥಗತಿ, ಬಜ್ಜಿ ಸೆಂಟರ್ ಗಳಿಗೂ ತೊಂದರೆ