Publish Date: Fri, 13 Sep 2019 (09:45 IST)
Updated Date: Fri, 13 Sep 2019 (09:47 IST)
ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ಅಧಿಕಾರಿಗಳಿಂದ ಬಂಧನಕ್ಕೊಳಗಾಗಿರುವ ಶಾಸಕ ಡಿಕೆ ಶಿವಕುಮಾರ್ ಇಡಿ ಕಸ್ಟಡಿ ಇಂದು ಅಂತ್ಯವಾಗಲಿದೆ. ಇನ್ನೊಂದೆಡೆ ಅಧಿಕ ರಕ್ತದೊತ್ತಡದಿಂದ ಬಳಲುತ್ತಿರುವ ಡಿಕೆಶಿಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಇಡಿ ಕಸ್ಟಡಿ ಅಂತ್ಯಗೊಂಡಿರುವ ಹಿನ್ನಲೆಯಲ್ಲಿ ಇಂದು ಮತ್ತೆ ಡಿಕೆ ಶಿವಕುಮಾರ್ ಪರ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಗೊಳಪಡಲಿದೆ. ಜಾಮೀನು ಅರ್ಜಿ ವಿಚಾರಣೆಗೊಳಪಡಿಸಲಿರುವ ಹಿನ್ನಲೆಯಲ್ಲಿ ಡಿಕೆಶಿ ಅಭಿಮಾನಿಗಳು, ಬೆಂಬಲಿಗರು ದೆಹಲಿಗೆ ತೆರಳಿದ್ದಾರೆ.
ಈ ನಡುವೆ ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿರುವ ಡಿಕೆಶಿಗೆ ಮಾತ್ರೆಗಳನ್ನು ನೀಡಲಾಗಿದ್ದರೂ ಗುಣಮುಖರಾಗದ ಹಿನ್ನಲೆಯಲ್ಲಿ ಪೊಲೀಸ್ ಭದ್ರತೆಯಲ್ಲಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಯಿತು.